India Today-Axis My India: ಅಸ್ಸಾಂನಲ್ಲಿ ಎನ್‌ಡಿಎಗೆ ಮತ್ತೆ ಗೆಲುವು
ಈಶಾನನ್ಯ ಭಾರತದ ರಾಜ್ಯ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಮೂರು ಹಂತದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಬಿಜೆಪಿ ಸೋಲಿಸುವ ಉದ್ದೇಶದಿಂದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಾಟಿಕ್ ಫ್ರಂಟ್ (ಎಐಯುಡಿಎಫ್), ಸಿಪಿಐ, ಸಿಪಿಐ (ಎಂ), ಸಿಪಿಐ(ಎಂಎಲ್) ಹಾಗೂ ಅಂಚಲಿಕ್ ಗಣ ಮೋರ್ಚಾ ಪಕ್ಷಗಳನ್ನು ಸೇರಿಸಿಕೊಂಡು ಕಾಂಗ್ರೆಸ್ ಮಹಾಮೈತ್ರಿಕೂಟ ರಚಿಸಿತ್ತು.
ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 6 ರಂದು ಮುಕ್ತಾಯಗೊಂಡರೆ, ಪಶ್ಚಿಮ ಬಂಗಾಳದಲ್ಲಿ 8ನೇ ಹಾಗೂ ಕೊನೆ ಹಂತದ ಮತದಾನ ಇಂದು (ಏಪ್ರಿಲ್ 29) ಸಂಪನ್ನವಾಗಿದೆ. ಪ್ರಮುಖ ಮಾಧ್ಯಮಗಳು ಸೇರಿದಂತೆ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೇ 2 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ.

ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯಂತೆ ಅಸ್ಸಾಂನಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಉತ್ತಮ ಶೇಕಡಾವಾರು ಮತಗಳಿಕೆ ಪಡೆದರೂ ನಂಬರ್ ಗೇಮ್‌ನಲ್ಲಿ ಭಾರಿ ಹಿನ್ನಡೆ ಅನುಭವಿಸಲಿದೆ ಎಂದಿದೆ.
ಅಸ್ಸಾಂ (126 ಸ್ಥಾನ, 64 ಮ್ಯಾಜಿಕ್ ನಂಬರ್) 2021 ಎಕ್ಸಿಟ್ ಪೋಲ್ ಫಲಿತಾಂಶ:
ಎನ್‌ಡಿಎ : 75-85
ಯುಪಿಎ: 40-50
ಇತರೆ: 1-4
ಬಿಜೆಪಿ+
ಬಿಜೆಪಿ 61-65; ಎಜಿಪಿ: 9-13; ಯುಪಿಪಿಎಲ್: 5-7
**
ಕಾಂಗ್ರೆಸ್ +
ಕಾಂಗ್ರೆಸ್: 24-30; ಎಐಯುಡಿಎಫ್: 13-16; ಬಿಪಿಎಫ್ 3-4
***
ಯುಆರ್‌ಎಫ್
ಎಜೆಪಿ 1; ಆರ್‌ಡಿ 1
2016ರಲ್ಲಿ 126 ವಿಧಾನಸಭಾ ಸ್ಥಾನಗಳ ಪೈಕಿ 60 ಬಿಜೆಪಿ ಶಾಸಕರು ಗೆದ್ದು ಅಧಿಕಾರಕ್ಕೇರಿತ್ತು. ಬೋಡೋ ಪೀಪಲ್ಸ್ ಫ್ರಂಟ್ ಹಾಗೂ ಅಸ್ಸೊಂ ಗಣ ಪರಿಷತ್ ಕ್ರಮವಾಗಿ 14 ಹಾಗೂ 12 ಸ್ಥಾನ ಗೆದ್ದು ಬಿಜೆಪಿ ಬೆಂಬಲ ಸೂಚಿಸಿದ್ದವು. ಎನ್ಡಿಎ 74 ಹಾಗೂ ಶೇ 41.1 ಮತ ಗಳಿಕೆ ಹಾಗೂ ಯುಪಿಎ 26 ಹಾಗೂ ಶೇ 31 ಮತ ಗಳಿಕೆ ಪಡೆದಿದ್ದವು.
ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಪುದುಚೇರಿಯಲ್ಲಿ 30 ಹಾಗೂ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಚುನಾವಣೆ ನಡೆಸಲಾಗಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications