ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ ಮತದಾರರಿಗೆ ರಾಹುಲ್ ಗಾಂಧಿಯ 5 ಭರವಸೆಗಳು

|
Google Oneindia Kannada News

ಗುವಾಹಟಿ, ಮಾರ್ಚ್ 19: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಚಹಾ ತೋಟದ ಕಾರ್ಮಿಕರ ಮೇಲೆ ಕಾಂಗ್ರೆಸ್ ದೃಷ್ಟಿ ನೆಟ್ಟಿದೆ. ಬಹುಸಂಖ್ಯಾತ ವರ್ಗದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭರಪೂರ ಆಶ್ವಾಸನೆಗಳನ್ನು ನೀಡಿದ್ದಾರೆ.

ದಿಬ್ರುಗರ್ಹ್ ನಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಬಿಜೆಪಿಯು ಚಹಾ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಕ್ಕೆ ಕನಿಷ್ಠ 351 ರೂಪಾಯಿ ಕೂಲಿ ನಿಗದಿಗೊಳಿಸುವುದಾಗಿ ಘೋಷಿಸಿತ್ತು. ಇಂದು ಅದೇ ಕಾರ್ಮಿಕರು ದಿನಂಪ್ರತಿ ದುಡಿದರೂ 167 ರೂಪಾಯಿ ಸಂಬಳವನ್ನು ನೀಡಲಾಗುತ್ತಿದೆ ಎಂದು ಕಿಡಿ ಕಾರಿದರು.

Explained: ಅಸ್ಸಾಂನಲ್ಲಿ ಕಾಂಗ್ರೆಸ್ ಗೆಲುವಿನ ಸೂತ್ರಕ್ಕಾಗಿ ಸಿಎಂ ಬಾಘೆಲ್ ಹೊಸ ಮಂತ್ರ!Explained: ಅಸ್ಸಾಂನಲ್ಲಿ ಕಾಂಗ್ರೆಸ್ ಗೆಲುವಿನ ಸೂತ್ರಕ್ಕಾಗಿ ಸಿಎಂ ಬಾಘೆಲ್ ಹೊಸ ಮಂತ್ರ!

ನಾನು ನರೇಂದ್ರ ಮೋದಿ ಅಲ್ಲ, ನಾನು ಸುಳ್ಳು ಹೇಳುವುದಿಲ್ಲ ಎಂದ ರಾಹುಲ್ ಗಾಂಧಿ ಅವರು, ರಾಜ್ಯದ ಮತದಾರರಿಗೆ ಐದು ಆಶ್ವಾಸನೆಗಳನ್ನು ನೀಡಿದರು. ಚಹಾ ತೋಟದ ಕಾರ್ಮಿಕರ ಸಮಸ್ಯೆ ನಿವಾರಣೆಗೆ ಒಂದು ಪ್ರತ್ಯೇಕ ಇಲಾಖೆಯನ್ನೇ ತೆರೆಯುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದರು.

Assam Election: Congress Leader Rahul Gandhi Give 5 Major Guarantees To Voters.

ಅಸ್ಸಾಂ ಮತದಾರರಿಗೆ ರಾಹುಲ್ ಗಾಂಧಿ ಆಫರ್:

ಅಸ್ಸಾಂನಲ್ಲಿ ಬಹುಸಂಖ್ಯಾತ ಚಹಾ ತೋಟದ ಕಾರ್ಮಿಕರಿಗೆ 365 ರೂಪಾಯಿ ದಿನಗೂಲಿ ನಿಗದಿಗೊಳಿಸುವುದು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಡೆಸಲಾಗುತ್ತದೆ. 5 ಲಕ್ಷ ಜನರಿಗೆ ಉದ್ಯೋಗ ನೀಡಲಾಗುವುದು. 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಇದರ ಜೊತೆಗೆ ಗೃಹಿಣಿಯರಿಗೆ 2000 ರೂಪಾಯಿ ಮಾಶಾಸನ ನೀಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದರು.

"ಉದ್ಯಮಿಗಳ ಹಿತಕ್ಕಾಗಿ ಬಿಜೆಪಿ ಕಾರ್ಯ":

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇಡ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ನೀವು ಮೊಬೈಲ್ ಫೋನ್, ಟೀ-ಶರ್ಟ್ಸ್ ಗಳನ್ನು ಒಮ್ಮೆ ನೋಡಿ. ಅವೆಲ್ಲ ಮೇಡ್ ಇನ್ ಚೀನಾ ಆಗಿವೆ. ಅವುಗಳನ್ನು ಮೇಡ್ ಇನ್ ಇಂಡಿಯಾ ಎಂದು ಬದಲಿಸುವ ಸಾಮರ್ಥ್ಯ ಬಿಜೆಪಿ ಸರ್ಕಾರಕ್ಕೆ ಇಲ್ಲ. ಬಿಜೆಪಿಯು ಉದ್ಯಮಿಗಳಿಗಾಗಿ ಕೆಲಸ ಮಾಡುತ್ತದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಅಸ್ಸಾಂನಲ್ಲಿ ಮೂರು ಹಂತದ ಚುನಾವಣೆ:

ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಏಪ್ರಿಲ್.1ರಂದು 39 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

English summary
Assam Assembly Election 2021: Congress Leader Rahul Gandhi Give 5 Major Guarantees To Voters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X