ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಅಸ್ಸಾಂನ 27 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

|
Google Oneindia Kannada News

ಗುವಾಹಟಿ, ಆಗಸ್ಟ್ 28: ವಿವಿಧ ರಾಜ್ಯ ಸರಕಾರಿ ಇಲಾಖೆಗಳಲ್ಲಿನ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವನೀಯ ನಕಲು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ತಿಂಗಳಲ್ಲಿ ಎರಡನೇ ಬಾರಿಗೆ ಭಾನುವಾರ ನಾಲ್ಕು ಗಂಟೆಗಳ ಕಾಲ ಇಂಟರ್‌ ನೆಟ್ ಸ್ಥಗಿತಗೊಳಿಸಲಾಗಿದೆ. ಅಸ್ಸಾಂನ 35 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಭಾನುವಾರ ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದ್ದು, ಯಾವುದೇ ಲೋಪವಿಲ್ಲದೆ ವಿವಿಧ ಇಲಾಖೆಗಳಲ್ಲಿನ ಉದ್ಯೋಗಗಳಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರಕಾರ ಅನುವು ಮಾಡಿಕೊಡುತ್ತದೆ.

ಗುವಾಹಟಿ To ಗೋವಾ: ಮಹಾ ಬಂಡಾಯ ಶಾಸಕರ ಮುಂದಿನ ಸ್ಕೆಚ್ ಏನು? ಗುವಾಹಟಿ To ಗೋವಾ: ಮಹಾ ಬಂಡಾಯ ಶಾಸಕರ ಮುಂದಿನ ಸ್ಕೆಚ್ ಏನು?

ಸರಕಾರದ ಆದೇಶದ ವಿರುದ್ಧದ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ, ಗುವಾಹಾಟಿ ಹೈಕೋರ್ಟ್ ತಡೆ ನೀಡಲು ನಿರಾಕರಿಸಿದ ನಂತರ, ಪರೀಕ್ಷಾ ಸಮಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮುಂದುವರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

Assam Mobile internet services suspended across 27 districts

ಅಲ್ಲದೆ, ಪರೀಕ್ಷೆಗಳು ನಡೆಯುತ್ತಿರುವ ಎಲ್ಲಾ 27 ಜಿಲ್ಲೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಸಹ ವಿಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿವಿಧ ಸರಕಾರಿ ಇಲಾಖೆಗಳ ಸುಮಾರು 30,000 ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಇದಕ್ಕಾಗಿ 1.4 ಮಿಲಿಯನ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅಂತಹ ಮೂರನೇ ಪರೀಕ್ಷೆಯನ್ನು ಸೆಪ್ಟೆಂಬರ್ 11 ರಂದು ನಿಗದಿಪಡಿಸಲಾಗಿದೆ, ಆದರೆ ಮತ್ತೊಮ್ಮೆ ಸ್ಥಗಿತಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ.

ಗ್ರೇಡ್-IV ಪರೀಕ್ಷೆಗಳು ಆಗಸ್ಟ್ 21 ರಂದು ಎರಡು ಪಾಳಿಗಳಲ್ಲಿ ನಡೆದಿದ್ದರೆ, ಗ್ರೇಡ್-III ಪರೀಕ್ಷೆಗಳು ಭಾನುವಾರ ನಡೆಯುತ್ತಿವೆ. ಗ್ರೇಡ್-III ಅಡಿಯಲ್ಲಿ ಹೆಚ್ಚಿನ ಹುದ್ದೆಗಳಿಗೆ ಪರೀಕ್ಷೆಗಳನ್ನು ಸೆಪ್ಟೆಂಬರ್ 11 ರಂದು ನಿಗದಿಪಡಿಸಲಾಗಿದೆ.

ಎಲ್ಲಾ ಪರೀಕ್ಷೆಗಳನ್ನು ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಅಸ್ಸಾಂ (SEBA) ನಡೆಸುತ್ತಿದೆ.

ಈ ಹಿಂದೆ ಸರಕಾರಿ ಉದ್ಯೋಗ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಂತಹ ಯಾವುದೇ ದುಷ್ಕೃತ್ಯಗಳನ್ನು ತಡೆಗಟ್ಟುವ ಹೆಚ್ಚುವರಿ ಕ್ರಮವಾಗಿ, ಪರೀಕ್ಷಾ ಕೇಂದ್ರದ ಒಳಗೆ ಅಭ್ಯರ್ಥಿಗಳು ಮತ್ತು ಪರೀಕ್ಷ ಕೇಂದ್ರದ ಉಸ್ತುವಾರಿಗಳು ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ಅನುಮತಿಸಲಾಗುವುದಿಲ್ಲ.

ಪ್ರತಿ ಪರೀಕ್ಷಾ ಕೇಂದ್ರದ ಉಸ್ತುವಾರಿಗೆ ಪರೀಕ್ಷಾ ಕೇಂದ್ರದ ವಿಡಿಯೋ ಮಾಡಿಕೊಳ್ಳಲು ಸಹ ಸೂಚಿಸಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪರೀಕ್ಷೆಗಳು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಈ ಹಿಂದೆ ವರ್ಚುವಲ್ ಸಭೆ ನಡೆಸಿದ್ದರು.

ಎಂಟು ದಿನಗಳಲ್ಲಿ ಪರೀಕ್ಷೆ ನಡೆಸುವ ಸಲುವಾಗಿ ರಾಜ್ಯದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಇದು ಎರಡನೇ ಬಾರಿ.

English summary
Mobile internet services across 27 districts of Assam were suspended for over four hours on Sunday, for recruitment examination. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X