ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಅಸ್ಸಾಂ: ಪರೀಕ್ಷೆ ನಕಲು ತಡೆಯಲು ಇಂಟರ್ನೆಟ್ ಸ್ಥಗಿತ

|
Google Oneindia Kannada News

ಗುವಾಹಟಿ, ಆಗಸ್ಟ್ 21: ಉದ್ಯೋಗಾಕಾಂಕ್ಷಿಗಳು ನಕಲು ಮಾಡುವುದನ್ನು ತಡೆಯಲು ಅಸ್ಸಾಂ ರಾಜ್ಯ ಸರಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ವಿವಿಧ ಇಲಾಖೆಗಳಲ್ಲಿನ 27,000 ಸರಕಾರಿ ಹುದ್ದೆಗಳನ್ನು ತುಂಬಲು ನಡೆಯಲಿರುವ ಅಸ್ಸಾಂನಲ್ಲಿ ಪ್ರಮುಖ ನೇಮಕಾತಿ ಪರೀಕ್ಷೆಗೆ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳು ನಕಲು ಮಾಡುವುದನ್ನು ತಡೆಯಲು ರಾಜ್ಯ ಸರಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

Breaking: ಅತ್ಯಾಚಾರ ಮತ್ತು ಕೊಲೆ ಆರೋಪಿಯನ್ನು ಹೊಡೆದು ಕೊಂದ ಜನBreaking: ಅತ್ಯಾಚಾರ ಮತ್ತು ಕೊಲೆ ಆರೋಪಿಯನ್ನು ಹೊಡೆದು ಕೊಂದ ಜನ

ಈ ಪರೀಕ್ಷೆಯು ರಾಜ್ಯದ ಅತಿದೊಡ್ಡ ನೇಮಕಾತಿ ಅಭಿಯಾನದ ಭಾಗವಾಗಿದ್ದು, ಇದರಲ್ಲಿ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸರಕಾರ ಹೇಳಿದೆ.

Assam Shutdown Internet To Prevent Cheating In An Exam

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿರುವುದರಿಂದ ಸಿಆರ್‌ಪಿಸಿಯ ಸೆಕ್ಷನ್ 144 ವಿಧಿಸಲಾಗುವುದು ಎಂದು ಅಸ್ಸಾಂ ಸರಕಾರ ತಿಳಿಸಿದೆ.

ಪರೀಕ್ಷಾ ನಿಯಮಗಳ ಭಾಗವಾಗಿ, ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಉಸ್ತುವಾರಿಗೆ ಪರೀಕ್ಷಾ ಕೇಂದ್ರದ ವಿಡಿಯೋ ಮಾಡಿಕೊಳ್ಳಲು ಸಹ ಸೂಚಿಸಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪರೀಕ್ಷೆಗಳು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ.

ಗ್ರೇಡ್- III ಮತ್ತು ಗ್ರೇಡ್- IV ಹುದ್ದೆಗಳನ್ನು ಭರ್ತಿ ಮಾಡಲು ಭಾನುವಾರ ಮೊದಲ ಹಂತದ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 28 ಮತ್ತು ಸೆಪ್ಟೆಂಬರ್ 11 ರಂದು ಮತ್ತೆ ಪರೀಕ್ಷಗಳು ನಡೆಯಲಿದೆ.

English summary
Assam government job exam to prevent candidates from cheating, government has suspended mobile internet services around examination centres.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X