ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂನಲ್ಲಿ ಶಾಲಾ-ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗೆ ಅವಕಾಶ

|
Google Oneindia Kannada News

ಗುವಾಹಟಿ, ಸಪ್ಟೆಂಬರ್.04: ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಆನ್ ಲೈನ್ ತರಗತಿ ಮತ್ತು ದೂರ ಶಿಕ್ಷಣ ತರಬೇತಿಗೆ ಸರ್ಕಾರವು ಅನುಮತಿ ನೀಡಿದೆ.

Recommended Video

ಇದ್ದಕ್ಕಿದ್ದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ DK ಶಿವಕುಮಾರ್ | Oneindia Kannada

ರಾಜ್ಯದಲ್ಲಿ ಸಪ್ಟೆಂಬರ್.30ರವರೆಗೂ ಎಲ್ಲ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ತರಬೇತಿ ಕೇಂದ್ರಗಳನ್ನು ತೆರೆಯದಿರಲು ತೀರ್ಮಾನಿಸಲಾಗಿದೆ. ಇದರ ಬದಲು ಆನ್ ಲೈನ್ ಮತ್ತು ದೂರಶಿಕ್ಷಣವು ಎಂದಿನಂತೆ ಮುಕ್ತವಾಗಿರಲಿದೆ ಎಂದು ಅಸ್ಸಾಂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಡಿಲ: ಇಂಗ್ಲೆಂಡ್‌ನಲ್ಲಿ ಶಾಲೆ, ಕಾಲೇಜುಗಳು ಪುನರಾರಂಭಕೊರೊನಾ ಲಾಕ್‌ಡೌನ್ ಸಡಿಲ: ಇಂಗ್ಲೆಂಡ್‌ನಲ್ಲಿ ಶಾಲೆ, ಕಾಲೇಜುಗಳು ಪುನರಾರಂಭ

ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಅಸ್ಸಾಂ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಹಿಮಂತ್ ಸರ್ಮಾ ತಿಳಿಸಿದ್ದಾರೆ.

Assam Unlock 4: Online Classes Allowed in School, College Till Sep.30

ಅಸ್ಸಾಂನಲ್ಲಿ ಕೊರೊನಾವೈರಸ್ ಪ್ರಕರಣ:

ಅಸ್ಸಾಂನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 118334ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ 90698 ಸೋಂಕಿತರು ಗುಣಮುಖರಾಗಿದ್ದು, 27303 ಸಕ್ರಿಯ ಪ್ರಕರಣಗಳಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಮಹಾಮಾರಿಗೆ 330ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ.

ಇನ್ನು, ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ 39,36,748ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ 83341 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ. ಮಹಾಮಾರಿಗೆ 1096 ಜನರು ಪ್ರಾಣ ಬಿಟ್ಟಿದ್ದು, ಇದುವರೆಗೂ 68,472 ಜನರು ಕೊವಿಡ್-19ಗೆ ಬಲಿಯಾಗಿದ್ದಾರೆ. ಒಟ್ಟು 39,36,748 ಕೊರೊನಾವೈರಸ್ ಸೋಂಕಿತರ ಪೈಕಿ 30,37,152 ಜನರು ಗುಣಮುಖರಾಗಿದ್ದು, 8,31,124 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Assam Unlock 4: Online Classes Allowed in School, College Till Sep.30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X