ಅಸ್ಸಾಂ ಚುನಾವಣೆ: ಬಿಜೆಪಿಯ 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಗುವಾಹಟಿ, ಮಾರ್ಚ್ 5: ಅಸ್ಸಾಂನಲ್ಲಿ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಮತ್ತು ಎರಡನೆಯ ಹಂತಗಳಲ್ಲಿ ಸ್ಪರ್ಧಿಸಲಿರುವ ಒಟ್ಟು 70 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಹಿರಂಗಪಡಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಮಜೌಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ, ಜಲುಕ್ಬರಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಹಿಮಾಂತ ಶರ್ಮಾ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇರಲಿಲ್ಲ. ಆದರೆ ಸೋನೊವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸದೆ, ಸೋನೊವಾಲ್ ಮತ್ತು ಶರ್ಮಾ ಅವರ ಜಂಟಿ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ.

126 ಕ್ಷೇತ್ರಗಳ ಪೈಕಿ 47 ಕ್ಷೇತ್ರಗಳಿಗೆ ಮಾರ್ಚ್ 27ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 1ರಂದು 39 ಕ್ಷೇತ್ರಗಳಿಗೆ ಎರಡನೆಯ ಹಂತ ಹಾಗೂ ಉಳಿದ 40 ಸೀಟುಗಳಿಗೆ ಏಪ್ರಿಲ್ 6ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

BJP Releases 70 Candidates List For Assam Assembly Election

ಈ ಬಾರಿ 11 ಶಾಸಕರನ್ನು ಬಿಜೆಪಿ ಮತ್ತೆ ಕಣಕ್ಕಿಳಿಸುತ್ತಿಲ್ಲ. ಅದರ ಪ್ರಾದೇಶಿಕ ಮಿತ್ರಪಕ್ಷ ಅಸೋಮ್ ಗಣ ಪರಿಷದ್ (ಎಜಿಪಿ), ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಫುಲ್ಲಾ ಕುಮಾರ್ ಮಹಾಂತ ಅವರ ಬದಲು ಬರ್ಹಾಂಪುರ ಕ್ಷೇತ್ರದಲ್ಲಿ ಬಿಜೆಪಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+