ಅಸ್ಸಾಂ ವಿಧಾನಸಭಾ ಚುನಾವಣೆಗೆ 17 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಗುವಾಹಟಿ, ಮಾರ್ಚ್ 14: ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 92 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷ ಸ್ಪಷ್ಟಪಡಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮೂರನೇ ಹಂತದ ಚುನಾವಣೆಗೆ ನಾವು 17 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

BJP Releases A List Of 17 Candidates For Assam Assembly Elections

ಅಸ್ಸಾಂ ವಿಧಾನಸಭೆಯ 92 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಉಳಿದ ಸ್ಥಾನಗಳಲ್ಲಿ ಮಿತ್ರಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಧರ್ಮಪುರ ವಿಧಾನಸಭಾ ಕ್ಷೇತ್ರದಿಂದ ಚಂದ್ರ ಮೋಹನ್ ಪಟೋವರಿ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಿಸಿದ್ದಾರೆ.

ಅಸ್ಸಾಂನಲ್ಲಿ ಮೂರು ಹಂತದ ಚುನಾವಣೆ:

ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಏಪ್ರಿಲ್.1ರಂದು 39 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+