• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ

|
Google Oneindia Kannada News

ಗುವಾಹಟಿ, ಮೇ 10: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರವಹಿಸಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ದೇವ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಮಣಿಪುರ ಸಿಎಂ ಎನ್. ಬಿರೆನ್ ಸಿಂಗ್ ಮತ್ತು ನಾಗಾಲ್ಯಾಂಡ್ ಸಿಎಂ ನೀಫಿಯು ರಿಯೊ ಹಾಗೂ ಇತರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಜೊತೆ ಸಂಪುಟ ಸದಸ್ಯರು ಕೂಡ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ನೂತನ ಮುಖ್ಯಮಂತ್ರಿಗಳಿಗೆ ಅಧಿಕಾರ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

English summary
Himanta Biswa Sarma was sworn in as the new Chief Minister of Assam, along with 13 members of his cabinet, by Governor Jagdish Mukhi this afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X