ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುವಾಹಟಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು: ಮತದಾರರಿಗೆ ಮೋದಿ ಧನ್ಯವಾದ

|
Google Oneindia Kannada News

ಗುವಾಹಟಿ, ಏಪ್ರಿಲ್ 24: ಗುವಾಹಟಿಯಲ್ಲಿ ಇಂದು ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಟ್ಟು 60 ವಾರ್ಡ್‌ಗಳ ಪೈಕಿ 58 ರಲ್ಲಿ ಗೆಲುವು ಸಾಧಿಸಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.

ಗುವಾಹಟಿ ಮಹಾನಗರ ಪಾಲಿಕೆಯ 57 ವಾರ್ಡ್‌ಗಳಲ್ಲಿ ಶುಕ್ರವಾರ ಮತದಾನ ನಡೆಯಿತು. ಮೂರು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ತನ್ನ ಖಾತೆ ತೆರೆಯಲು ವಿಫಲವಾದರೆ, ಆಮ್ ಆದ್ಮಿ ಪಕ್ಷದ ಮಾಸುಮಾ ಬೇಗಂ ವಾರ್ಡ್ ನಂ. 42 ರಲ್ಲಿ ಗೆದ್ದಿದ್ದು, ಪ್ರಾದೇಶಿಕ ಪಕ್ಷ ಅಸ್ಸಾಂ ರಾಷ್ಟ್ರೀಯ ಪರಿಷತ್ ಒಂದು ವಾರ್ಡ್‌ನಲ್ಲಿ ಗೆದ್ದಿದೆ.

Breaking; ಗುವಾಹಟಿ ಪಾಲಿಕೆ ಚುನಾವಣೆ; ಬಿಜೆಪಿ ಮುನ್ನಡೆ Breaking; ಗುವಾಹಟಿ ಪಾಲಿಕೆ ಚುನಾವಣೆ; ಬಿಜೆಪಿ ಮುನ್ನಡೆ

ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಬಿಜೆಪಿಯು ಕೊನೆಯ ಹಂತದ ಮತ ಎಣಿಕೆ ಬಳಿಕ ಗೆಲುವು ಪಡೆದುಕೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುವಾಹಟಿಯ ಜನರಿಗೆ "ಪ್ರತಿಧ್ವನಿಸುವ ಜನಾದೇಶ" ಕ್ಕಾಗಿ ಧನ್ಯವಾದ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.

BJP Sweeps Guwahati Civic Polls, PM Modi Says Thank You to Voters

ಪ್ರಧಾನಿ ಮೋದಿ ಟ್ವೀಟ್

"ಧನ್ಯವಾದಗಳು ಗುವಾಹಟಿ! ಅಭಿವೃದ್ಧಿಯ ಅಜೆಂಡಾವನ್ನು ನಿರ್ಮಿಸಲು ಈ ಸುಂದರ ನಗರದ ಜನರು ಬಿಜೆಪಿ ಅಸ್ಸಾಂಗೆ ಜನಾದೇಶವನ್ನು ನೀಡಿದ್ದಾರೆ. ಅವರು ಮುಖ್ಯಮಂತ್ರಿ ಹಿಮಂತ ಬಿಸ್ವಾ ನೇತೃತ್ವದ ರಾಜ್ಯ ಸರ್ಕಾರದ ಶ್ರಮ ಈ ಮತದ ಆಶೀರ್ವಾದವನ್ನು ನೀಡಿದ್ದಾರೆ. ಕಠಿಣ ಶ್ರಮಕ್ಕಾಗಿ ಪ್ರತಿ ಬಿಜೆಪಿ ಕಾರ್ಯಕರ್ತರಿಗೆ ನನ್ನ ಕೃತಜ್ಞತೆಗಳು," ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹರ್ಷ

ಇನ್ನು ಫಲಿತಾಂಶವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸ್ವಾಗತಿಸಿದ್ದಾರೆ. ಇದೊಂದು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ. "ಪಾಲಿಕೆ ಚುನಾವಣೆಯಲ್ಲಿ ಅಸ್ಸಾಂ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಐತಿಹಾಸಿಕ ಜಯವನ್ನು ನೀಡಿದ್ದಕ್ಕಾಗಿ ನಾನು ಗುವಾಹಟಿಯ ಜನತೆಗೆ ತಲೆಬಾಗುತ್ತೇನೆ. ಈ ಬೃಹತ್ ಜನಾದೇಶದೊಂದಿಗೆ, ಜನರು ಆದರ್ನಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಮಾರ್ಗದರ್ಶನದಲ್ಲಿ ನಮ್ಮ ಅಭಿವೃದ್ಧಿ ಪಯಣದಲ್ಲಿ ತಮ್ಮ ನಂಬಿಕೆಯನ್ನು ಹೊಂದಿದ್ದಾರೆ ಎಂದು ಮತ್ತೆ ಸಾಬೀತು ಮಾಡಿದ್ದಾರೆ," ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಶೇ.52ಕ್ಕೂ ಹೆಚ್ಚು ಮತದಾನವಾಗಿದೆ. ಗುವಾಹಟಿಯ ಈ ಪಾಲಿಕೆ ಚುನಾವಣೆಗಳು ಸಹ ಮಹತ್ವದ್ದಾಗಿವೆ. ಮೊದಲ ಬಾರಿಗೆ ಎಲ್ಲಾ ಬೂತ್‌ಗಳಲ್ಲಿ ಇವಿಎಂಗಳನ್ನು ಬಳಸಲಾಗಿದೆ. ಈ ಚುನಾವಣೆಯಲ್ಲಿ ಒಟ್ಟು 197 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಬಿಜೆಪಿ 53 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಪೈಕಿ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಪಕ್ಷದ ಮಿತ್ರಪಕ್ಷ ಅಸೋಮ್ ಗಣ ಪರಿಷತ್ ಏಳು ವಾರ್ಡ್‌ಗಳಲ್ಲಿ ಸ್ಪರ್ಧಿಸಿದೆ. ಕಾಂಗ್ರೆಸ್ 54, ಎಎಪಿ 38, ಅಸ್ಸಾಂ ರಾಷ್ಟ್ರೀಯ ಪರಿಷತ್ 25 ಮತ್ತು ಸಿಪಿಎಂ ನಾಲ್ಕು ವಾರ್ಡ್‌ಗಳಲ್ಲಿ ಸ್ಪರ್ಧಿಸಿದೆ.

English summary
BJP Sweeps Guwahati Civic Polls, PM Modi Tweets and Says Thank You to Voters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X