• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂ: ಸಿಎಎ ಹೊರತಾಗಿ ಚಹಾ ಕಾರ್ಮಿಕರಿಗೆ ರಾಹುಲ್ ಗಾಂಧಿ ಸಿಹಿಸುದ್ದಿ

|

ಗುವಾಹಟಿ, ಮಾರ್ಚ್ 30: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಅಸ್ಸಾಂನ ಭಾಷೆ, ಇತಿಹಾಸ ಮತ್ತು ಸಂಸ್ಕೃತಿಯ ಮೇಲೆ ನಡೆಸುತ್ತಿರುವ ದಾಳಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವರುಣನ ಅಬ್ಬರದಿಂದಾಗಿ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುವುದಕ್ಕೆ ಸಾಧ್ಯವಾಗದ ಹಿನ್ನೆಲೆ ಮತದಾರರಿಗೆ ರಾಹುಲ್ ಗಾಂಧಿ ವಿಡಿಯೋ ಸಂದೇಶವನ್ನು ಕಳುಹಿಸಿದ್ದಾರೆ. ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

"ಚಹಾ ಕಾರ್ಮಿಕರ ಸಮಸ್ಯೆ ಚಹಾ ಮಾರುವವರಿಗಿಂತ ಇನ್ಯಾರಿಗೆ ಹೆಚ್ಚು ಅರ್ಥವಾಗುತ್ತೆ?"

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಮೈತ್ರಿಕೂಟದ ಪಕ್ಷಗಳು ಸರ್ಕಾರ ರಚಿಸಿದರೆ ಈ ಮೊದಲೇ ನೀಡಿರುವ ಐದು ಭರವಸೆಗಳನ್ನು ಈಡೇರಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಸಿಎಎ ಕಾಯ್ದೆಯು ಸಂಸ್ಕೃತಿ ಮೇಲಿನ ದಾಳಿ

ಸಿಎಎ ಕಾಯ್ದೆಯು ಸಂಸ್ಕೃತಿ ಮೇಲಿನ ದಾಳಿ

"ಕಾಂಗ್ರೆಸ್ ನೀಡಿರುವ ಮೊದಲ ಭರವಸೆಯಂತೆ ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ. ಈ ಕಾಯ್ದೆಯು ರಾಜ್ಯದ ಸಂಪ್ರದಾಯ, ಸಂಸ್ಕೃತಿ ಮತ್ತು ಭಾಷೆಯ ಮೇಲೆ ನಡೆಸುತ್ತಿರುವ ದಾಳಿ" ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಕಳೆದ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ಅಸ್ಸಾಂನಲ್ಲಿ ಉಗ್ರ ಹೋರಾಟ ನಡೆದಿತ್ತು. ಅಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಐವರು ಪ್ರತಿಭಟನಾಕಾರರು ಮೃತಪಟ್ಟಿದ್ದರು.

ಅಸ್ಸಾಂನಲ್ಲಿ ಚಹಾ ಕಾರ್ಮಿಕರ ಕೂಲಿ ಹೆಚ್ಚಳ

ಅಸ್ಸಾಂನಲ್ಲಿ ಚಹಾ ಕಾರ್ಮಿಕರ ಕೂಲಿ ಹೆಚ್ಚಳ

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಬಿಜೆಪಿಯು ಚಹಾ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಕ್ಕೆ ಕನಿಷ್ಠ 351 ರೂಪಾಯಿ ಕೂಲಿ ನಿಗದಿಗೊಳಿಸುವುದಾಗಿ ಘೋಷಿಸಿತ್ತು. ಇಂದು ಅದೇ ಕಾರ್ಮಿಕರು ದಿನಂಪ್ರತಿ ದುಡಿದರೂ 167 ರೂಪಾಯಿ ಸಂಬಳವನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಚಹಾ ಕಾರ್ಮಿಕರಿಗೆ ದಿನಕ್ಕೆ 365 ರೂಪಾಯಿ ಕೂಲಿ ನಿಗದಿಗೊಳಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

5 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವ ಭರವಸೆ

5 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವ ಭರವಸೆ

ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರವು ಅಸ್ತಿತ್ವಕ್ಕೆ ಬಂದರೆ 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸಲಾಗುವುದು. ರಾಜ್ಯದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಇದರ ಜೊತೆಗೆ ಗೃಹಿಣಿಯರಿಗೆ 2000 ರೂಪಾಯಿ ಮಾಶಾಸನ ನೀಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.

ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ

ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ

ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯದಿದೆ. ಏಪ್ರಿಲ್.1ರಂದು 39 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

English summary
Assam Assembly Election 2021: Congress Will Not Allow To Be Implemented CAA In State; Rahul Gandhi Gave 5 Promises.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X