• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತ್ರಿಪುರಾ ಹಿಂಸಾಚಾರ ವರದಿ ಪ್ರಕರಣ: ಇಬ್ಬರು ಪತ್ರಕರ್ತೆಯರಿಗೆ ಜಾಮೀನು

|
Google Oneindia Kannada News

ಗುವಾಹಟಿ, ನವೆಂಬರ್ 16: ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪತ್ರಕರ್ತರಾದ ಸಮೃದ್ಧಿ ಕೆ. ಸಕುನಿಯಾ ಮತ್ತು ಸ್ವರ್ಣಾ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲಾ ಚೀಫ್ ಜ್ಯೂಡಿಷಿಯಲ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ನ್ಯಾಯಾಲಯ ಇಬ್ಬರಿಗೂ ಸೂಚಿಸಿದೆ. ರಾಜ್ಯದ ಮಸೀದಿಯೊಂದರಲ್ಲಿ ನಡೆದ ವಿಧ್ವಂಸಕ ಕೃತ್ಯದ ಕುರಿತು ವರದಿ ಮಾಡಿದ್ದಕ್ಕಾಗಿ ಈ ಇಬ್ಬರೂ ಮಹಿಳಾ ಪತ್ರಕರ್ತರನ್ನು ಬಂಧಿಸಲಾಗಿತ್ತು.

ಎಚ್‌ಡಬ್ಲ್ಯೂ ನ್ಯೂಸ್ ನೆಟ್‌ವರ್ಕ್‌ಗಾಗಿ ಕೆಲಸ ಮಾಡುವ ಈ ಪತ್ರಕರ್ತರು ತ್ರಿಪುರಾದಲ್ಲಿ ಇತ್ತೀಚಿನ ಹಿಂಸಾಚಾರವನ್ನು ವರದಿ ಮಾಡುತ್ತಿದ್ದರು.

ಕಳೆದ ರಾತ್ರಿ ಕರೀಂಗಂಜ್‌ನಿಂದ ಮುಂಬೈ ಮೂಲದ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರು ಸುದ್ದಿ ಮಾಡಲು ಬಂದಿದ್ದರು. ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಮಾಧ್ಯಮಗಳಲ್ಲಿ ಧಾರ್ಮಿಕ ವಿಧ್ವಂಸಕ ಕೃತ್ಯಗಳು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದೆ.

ಅವರು ಸತ್ಯವನ್ನು ಪರಿಶೀಲಿಸಲು ಮತ್ತು ಸುದ್ದಿ ಮಾಡಲು ಇಲ್ಲಿಗೆ ಬಂದರು. ಅವರು ಉದಯಪುರ ಮತ್ತು ಉತ್ತರ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದರು, ಅಲ್ಲಿ ಮಸೀದಿಗಳ ಮೇಲೆ ದಾಳಿ ಮತ್ತು ಧ್ವಂಸ ಮಾಡಲಾಗಿದೆ ಎಂಬ ಆರೋಪಗಳಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದರು. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ಅವರ ಮೇಲೆ ತ್ರಿಪುರಾದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇಬ್ಬರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಮ್‌ಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದರು. ನಂತರ ಅವರನ್ನು ತ್ರಿಪುರಾ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪತ್ರಕರ್ತರ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿತ್ತು ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು.

ಪತ್ರಕರ್ತೆಯರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, 'ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?" ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದರು.

ಇದಕ್ಕೂ ಮೊದಲು ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು "ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ" ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಭಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ.

English summary
Granting bail to two journalists who were arrested on Sunday over their reporting of the recent communal clashes in Tripura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X