• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂ: 4 ಬೂತ್‌ಗಳಲ್ಲಿ ಮರು ಮತದಾನಕ್ಕೆ ಆಯೋಗ ಆದೇಶ

|
Google Oneindia Kannada News

ಗುವಾಹಟಿ, ಏಪ್ರಿಲ್ 10: ಅಸ್ಸಾಂನ 4 ಬೂತ್‌ಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶಿಸಿದೆ.

ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕರೊಬ್ಬರ ಕಾರಿನಲ್ಲಿ ಇವಿಎಂ ಪತ್ತೆಯಾದ ಹಿನ್ನೆಲೆಯಲ್ಲಿ ಅಸ್ಸಾಂನ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಆದೇಶಿಸಿದೆ.

ಚುನಾವಣೆ ಮುಗಿಯುತ್ತಿದ್ದಂತೆಯೇ 'ಆಪರೇಷನ್ ಕಮಲ' ಭೀತಿ: ಶುರುವಾಯ್ತು ರೆಸಾರ್ಟ್ ರಾಜಕಾರಣಚುನಾವಣೆ ಮುಗಿಯುತ್ತಿದ್ದಂತೆಯೇ 'ಆಪರೇಷನ್ ಕಮಲ' ಭೀತಿ: ಶುರುವಾಯ್ತು ರೆಸಾರ್ಟ್ ರಾಜಕಾರಣ

ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು ಹಫ್ಲಾಂಗ್ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ಅಸ್ಸಾಂ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಏಪ್ರಿಲ್ 1 ರಂದು ಅಸ್ಸಾಂ ವಿಧಾನಸಭಾ ಚುನಾವಣೆಗೆ ನಡೆದ ಎರಡನೇ ಹಂತದಲ್ಲಿ ಈ ಮೂರು ಕ್ಷೇತ್ರಗಳಿಗೂ ಮತದಾನ ನಡೆದಿತ್ತು. ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಕೃಷ್ಣೇಂದು ಪಾಲ್ ಅವರ ಪತ್ನಿಯ ಕಾರಿನಲ್ಲಿ ಇವಿಎಂ ಸಾಗಿಸಿದ ಘಟನೆ ಬಗ್ಗೆ ಕರೀಮ್‌ಗಂಜ್ ಜಿಲ್ಲಾಧಿಕಾರಿ ಹಾಗೂ ರಿಟರ್ನಿಂಗ್ ಆಫೀಸರ್ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಸೇರಿದ ಕಾರಿನಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರ(ಇವಿಎಂ) ಪತ್ತೆಯಾದ ನಂತರ ರತಾಬಾರಿ (ಎಸ್‌ಸಿ) ಕ್ಷೇತ್ರದ ಇಂದಿರಾ ಎಂವಿ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 149 ರಲ್ಲಿ ಮರು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

English summary
The Election Commission of India has ordered re-polling at 4 polling stations in Ratabari, Sonai and Haflong, Assembly constituencies in Assam. The Commission has declared void, the votes cast at these stations on April 1. Re-polling will be conducted for the three seats on April 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X