ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿ ತಿಂಗಳು ಗೃಹಿಣಿಯರಿಗೆ 2000 ರೂಪಾಯಿ ಗೌರವ ಧನ: ಪ್ರಿಯಾಂಕಾ ಗಾಂಧಿ

|
Google Oneindia Kannada News

ಗುವಾಹಟಿ, ಮಾರ್ಚ್.02: ಅಸ್ಸಾಂ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.

ಅಸ್ಸಾಂನ ತೇಜ್ ಪುರ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಹೊಸ್ತಿಲಿನಲ್ಲಿ ಭರಪೂರ ಆಶ್ವಾಸನೆಗಳನ್ನು ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಮನೆ ಮಹಿಳೆಯರಿಗೆ "ಗೃಹಿಣಿ ಸಮ್ಮಾನ್" ಯೋಜನೆಯಡಿ ಪ್ರತಿ ತಿಂಗಳೂ 2000 ರೂಪಾಯಿ ನೀಡಲಾಗುತ್ತದೆ ಎಂದರು.

ಅಸ್ಸಾಂ ವಿಧಾನಸಭೆ ಚುನಾವಣೆ 2021: ದಿನಾಂಕ, ಕ್ಷೇತ್ರಗಳ ವಿವರ...ಅಸ್ಸಾಂ ವಿಧಾನಸಭೆ ಚುನಾವಣೆ 2021: ದಿನಾಂಕ, ಕ್ಷೇತ್ರಗಳ ವಿವರ...

ಚಹಾ ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರ ಕನಿಷ್ಠ ದಿನಗೂಲಿ ಮೊತ್ತವನ್ನು 365 ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Every Month Govt Provide Rs 2,000 To All Housewives Under Grihini Samman Yojana

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲ್ಲ:

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ(CAA)ಯು ರಾಜ್ಯದಲ್ಲಿ ಜಾರಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಮತ್ತು ಫಲಿತಾಂಶ:

ಅಸ್ಸಾಂ ವಿಧಾನಸಭೆಯ 126 ಸ್ಥಾನಗಳಿಗೆ ಮೂರು ಹಂತದಲ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ಮಾರ್ಚ್‌ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ.

English summary
Every Month Govt Provide Rs 2,000 To All Housewives Under 'Grihini Samman Yojana, Priyanka Gandhi Said At Assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X