ಅಸ್ಸಾಂನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; 24 ಗಂಟೆಯಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಆರೋಪಿಗಳು ಬಲಿ

ಗುವಾಹಟಿ, ಮಾರ್ಚ್ 16: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಪೊಲೀಸರು ಎನ್‌ಕೌಂಟರ್ ಮಾಡಿರುವ ಘಟನೆ ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆದಿದೆ.

ಗುವಾಹಟಿಯ ಹೊರವಲಯದಲ್ಲಿ ಅಪರಾಧ ಸ್ಥಳದ ಮಹಜರು ಸಲುವಾಗಿ ಬಂದಿದ್ದ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡುಹಾರಿಸಿ ಆರೋಪಿಗಳನ್ನು ಹತ್ಯೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸರು, ಬಿಕಿಅಲಿ (20), ರಾಜೇಶ್ ಮುಂಡಾ (38) ಎಂಬ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿಸಿದ್ದಾರೆ.

Gang Rape on Girl in Assam; Two accused Died in the Encounter

ಈ ಕುರಿತು ಮಾಹಿತಿ ನೀಡಿರುವ ಗುವಾಹಟಿ ಎಸ್ಪಿ ಅಭಿಜಿತ್ ಶರ್ಮಾ, ಅಲಿಯ ದೇಹದ ನಾಲ್ಕು ಭಾಗಗಳಲ್ಲಿ ಗಾಯದ ಗುರುತುಗಳಾಗಿವೆ. ಒಂದು ಎದೆಯ ಭಾಗದಲ್ಲಿ ಉಳಿದ ಮೂರು ಬೆನ್ನಿನ ಭಾಗದಲ್ಲಿ ಗಾಯಗಳಾಗಿದ್ದವು. ಆರೋಪಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಗುಂಡಿನ ಗಾಯದ ಪೂರ್ಣ ವಿರವರಗಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ಆರೋಪಿ ಮಜ್ಬತ್ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರ ಗುಂಡೇಟಿಗೆ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.

ಅಲ್ಲದೆ, ಗುವಾಹಟಿಯ ಪನ್‌ಬಜಾರ್ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ಟ್ವಿಂಕಲ್ ಗೋಸ್ವಾಮಿ ಸಹ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾಲು ಮತ್ತು ಕೈಗೆ ಸಣ್ಣಪುಟ್ಟ ಗಾಯಗಳಾಗಿರುವ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಎಸ್ಪಿ ಅಭಿಜಿತ್ ಶರ್ಮಾ ಹೇಳಿದ್ದಾರೆ.

ಏನಿದು ಘಟನೆ?
ಫೆ.16ರಂದು ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಕುಟುಂಬಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ವಿಷಯ ಹೊರಗೆ ತಿಳಿಸಿದರೆ, ಚಿತ್ರೀಕರಿಸಿದ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ನಡುವೆ ಚಿತ್ರೀಕರಿಸಿದ ವೀಡಿಯೋವನ್ನು ಡಿಲೀಟ್ ಮಾಡುವುದಾಗಿ ಹೇಳಿ ಫೆ.19ರಂದು ಗುವಾಹಟಿಯ ಹೋಟೆಲ್‌ಗೆ ಹುಡುಗಿಯನ್ನು ಕರೆದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಅಲಿ ಮತ್ತು ಇತರ ನಾಲ್ವರು ಆರೋಪಿಗಳು 16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಂದು ವಾರದ ನಂತರ ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ವಿರುದ್ಧ ಐಪಿಸಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದೀಗ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+