ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ; ಧಾರಾಕಾರ ಮಳೆ, ಪ್ರವಾಹದಂತಹ ಪರಿಸ್ಥಿತಿ

|
Google Oneindia Kannada News

ಗುಹಾವಟಿ, ಮೇ 15; ಅಸ್ಸಾಂನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಗೆ ಹಲವಾರು ಪ್ರದೇಶದಲ್ಲಿ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದೆ. ಅಸ್ಸಾಂನ ಹಫ್ಲಾಂಗ್‌ನಲ್ಲಿ ಭೂಕುಸಿತದಿಂದ 3 ಜನರು ಸಾವನ್ನಪ್ಪಿದ್ದಾರೆ.

ಅಸಾನಿ ಚಂಡಮಾರುತದ ನಂತರ ಅಸ್ಸಾಂನಲ್ಲಿ ನಿರಂತರ ಮಳೆಯಾಗುತ್ತಿದೆ. ಹಫ್ಲಾಂಗ್ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದೆ. ನಿರಂತರ ಮಳೆ ಮತ್ತು ಪ್ರವಾಹದಂತಹ ಪರಿಸ್ಥಿತಿಯಿಂದ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೊಜೈ ಮತ್ತು ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ಕೂಡ ಹೊಜೈ ಜಿಲ್ಲೆಯಲ್ಲಿ ಪ್ರವಾಹದ ನೀರಿನಲ್ಲಿ ಮುಳುಗಿದೆ. ಹೊಜೈ ಜಿಲ್ಲೆಯಲ್ಲಿ ಗಂಭೀರ ಪ್ರವಾಹ ಪರಿಸ್ಥಿತಿಯಿಂದಾಗಿ ಹಲವು ಗ್ರಾಮಗಳು ಮುಳುಗಿವೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ಜನಜೀವನ ಅಸ್ತವ್ಯಸ್ತಗೊಡಿದ್ದು, ಜನರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಮಳೆಯಿಂದಾಗಿ ಹಲವು ಕಟ್ಟಡಗಳಿಗೂ ಹಾನಿಯಾಗಿದೆ.

Heavy Rain Floods in Assam, 3 People Killed Haflong

ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂ ಕುಸಿತದಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇದರೊಂದಿಗೆ ಕರ್ಬಿ ಅಂಗ್ಲಾಂಗ್ ವೆಸ್ಟ್, ಕ್ಯಾಚಾರ್, ಧೆಮಾಜಿ, ಹೊಜೈ, ನಾಗಾಂವ್ ಮತ್ತು ಕಾಮ್ರೂಪ್‌ನ 94 ಗ್ರಾಮಗಳಲ್ಲಿ ಒಟ್ಟು 24,681 ಜನರು ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

English summary
A flood-like situation is formed in many areas of district Dima Hasao amid incessant rains in Assam. The state has been receiving continuous rain since the onset of cyclone Asani, causing water-Logging in many areas
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X