ಅಸ್ಸಾಂ; ಸಿಎಂ ಅಭ್ಯರ್ಥಿಯಾಗಿ ಹಿಮಂತ್ ಬಿಸ್ವಾಸ್ ಶರ್ಮಾ ಆಯ್ಕೆ

ಗೌಹಾತಿ, ಮೇ 09; ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿಯ ಹಿಮಂತ್ ಬಿಸ್ವಾಸ್ ಶರ್ಮಾ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಭಾನುವಾರ ಗೌಹಾತಿಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ 60, ಕಾಂಗ್ರೆಸ್ 29, ಎಐಯುಡಿಎಫ್ 16, ಎಜಿಪಿ 9, ಬಿಪಿಎಫ್ 4 ಸ್ಥಾನಗಳಲ್ಲಿ ಜಯಗಳಿಸಿವೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 2ನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದೆ.

Himanta Biswa Sarma Elected As CM Candidate Of Assam

ಬಿಜೆಪಿ ಅಸ್ಸಾಂನಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದೆ. ಕಳೆದ ಬಾರಿ ಬಿಜೆಪಿ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಸರ್ಬಾನಂದ ಸೋನೊವಾಲ್ ಅವರು ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಹಿಮಂತ್ ಬಿಸ್ವಾಸ್ ಶರ್ಮಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2ನೇ ಬಾರಿಗೆ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್‌ಯೇತರ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿ ಪಾಲಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+