ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ; ಸಿಎಂ ಅಭ್ಯರ್ಥಿಯಾಗಿ ಹಿಮಂತ್ ಬಿಸ್ವಾಸ್ ಶರ್ಮಾ ಆಯ್ಕೆ

|
Google Oneindia Kannada News

ಗೌಹಾತಿ, ಮೇ 09; ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿಯ ಹಿಮಂತ್ ಬಿಸ್ವಾಸ್ ಶರ್ಮಾ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಭಾನುವಾರ ಗೌಹಾತಿಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ಅಸ್ಸಾಂ; ಬಿಜೆಪಿ ಗೆಲುವಿಗೆ ಅಡ್ಡಿಯಾಗಲಿಲ್ಲ ಸಿಎಎ ವಿಚಾರ ಅಸ್ಸಾಂ; ಬಿಜೆಪಿ ಗೆಲುವಿಗೆ ಅಡ್ಡಿಯಾಗಲಿಲ್ಲ ಸಿಎಎ ವಿಚಾರ

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ 60, ಕಾಂಗ್ರೆಸ್ 29, ಎಐಯುಡಿಎಫ್ 16, ಎಜಿಪಿ 9, ಬಿಪಿಎಫ್ 4 ಸ್ಥಾನಗಳಲ್ಲಿ ಜಯಗಳಿಸಿವೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 2ನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದೆ.

ಅಸ್ಸಾಂನಲ್ಲಿ ದಾಖಲೆ ಬರೆದ ಬಿಜೆಪಿ; ಯಾರಿಗೆ, ಎಷ್ಟು ಮತ? ಅಸ್ಸಾಂನಲ್ಲಿ ದಾಖಲೆ ಬರೆದ ಬಿಜೆಪಿ; ಯಾರಿಗೆ, ಎಷ್ಟು ಮತ?

Himanta Biswa Sarma Elected As CM Candidate Of Assam

ಬಿಜೆಪಿ ಅಸ್ಸಾಂನಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದೆ. ಕಳೆದ ಬಾರಿ ಬಿಜೆಪಿ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಸರ್ಬಾನಂದ ಸೋನೊವಾಲ್ ಅವರು ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Infographics: ಕೇರಳ ಪಕ್ಷವಾರು ಫಲಿತಾಂಶ ಸಮಗ್ರ ಅಂಕಿ ಅಂಶInfographics: ಕೇರಳ ಪಕ್ಷವಾರು ಫಲಿತಾಂಶ ಸಮಗ್ರ ಅಂಕಿ ಅಂಶ

ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಹಿಮಂತ್ ಬಿಸ್ವಾಸ್ ಶರ್ಮಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2ನೇ ಬಾರಿಗೆ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್‌ಯೇತರ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿ ಪಾಲಾಗಲಿದೆ.

English summary
BJP MLA Himanta Biswa Sarma elected as the leader of the BJP legislative party in Assam. He will take oath as chief minister on Monday, May 10, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X