ಅಸ್ಸಾಂ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಐಪಿಎಸ್ ಅಧಿಕಾರಿ ಈಗ ಎಸ್‌ಪಿ
ಗುವಹಾಟಿ, ಮೇ 20: ಇತ್ತೀಚೆಗೆ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದ ಐಪಿಎಸ್ ಅಧಿಕಾರಿಯನ್ನು ಮೇ 14 ರಂದು ರಾಜ್ಯದ ಕಮ್ರೂಪ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಈ ಹಿಂದೆ ಈ ಅಧಿಕಾರಿಯು ಗುವಾಹಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವರ್ಷದ ಮಾರ್ಚ್ 31 ರಂದು ಈ ಐಪಿಎಸ್ ಅಧಿಕಾರಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 354 ಎ ಅಡಿಯಲ್ಲಿ ಹಾಗೂ ಪೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿತ್ತು. ಹಾಗೆಯೇ ಚಾರ್ಜ್‌ಶೀಟ್ ಅನ್ನು ಕಮ್ರೂಪ್ ಜಿಲ್ಲೆಯ ವಿಶೇಷ ನ್ಯಾಯಾಧೀಶರ ಮುಂದೆ ಸಲ್ಲಿಸಲಾಗಿತ್ತು.
ಈ ದೂರನ್ನು 2020 ರ ಜನವರಿ 3 ರಂದು ದಾಖಲಿಸಲಾಗಿದ್ದು ಅಸ್ಸಾಂ ಅಪರಾಧ ತನಿಖಾ ಇಲಾಖೆ ಈ ಪ್ರಕರಣದ ತನಿಖೆ ನಡೆಸಿದೆ. ಇನ್ನು ಚಾರ್ಜ್‌ಶೀಟ್‌ನಲ್ಲಿ, ಈ ಐಪಿಎಸ್ ಅಧಿಕಾರಿಯು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕಷ್ಟು ಪುರಾವೆಗಳು ದೊರೆತಿವೆ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.

ಆದರೆ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಜ್ಯೋತಿ ಮಹಂತಾ ಈ ವಿಷಯವು ಕಾನೂನಾತ್ಮಕವಾದುದು ಎಂದು ಹೇಳಿದ್ದಾರೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಿದ್ದಪಡಿಸಲಾಗುವುದು. ನ್ಯಾಯಾಲಯವು ತೀರ್ಪು ನೀಡಿದರೆ, ಅವರನ್ನು ಬಂಧನಕ್ಕೆ ಒಳಪಡಿಸಲಾಗುವುದು. ಆದರೆ ನ್ಯಾಯಾಲಯ ತೀರ್ಪು ನೀಡುವವರೆಗೆ, ನಾವು ಅವರ ಸೇವೆಯನ್ನು ಬಳಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಈ ವರ್ಗಾವಣೆ ಆದೇಶವನ್ನು ರಾಜ್ಯ ಗೃಹ ಇಲಾಖೆ ಹೊರಡಿಸಿದೆ ಎಂದು ಡಿಜಿಪಿ ಮಹಂತಾ ತಿಳಿಸಿದ್ದಾರೆ.
2019 ರ ಡಿಸೆಂಬರ್ 31 ರಂದು ಆರೋಪಿಯಾದ ಐಪಿಎಸ್ ಅಧಿಕಾರಿಯ ನಿವಾಸದಲ್ಲಿ ಪಾರ್ಟಿಯೊಂದು ನಡೆದಿದ್ದು, ಈ ಸಂದರ್ಭದಲ್ಲಿ ಈ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿಯೂ ಆಗಿರುವ ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ 2020 ರ ಜನವರಿ 3 ರಂದು ಗುವಾಹಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ, ಪ್ರಕರಣವನ್ನು ಅಸ್ಸಾಂನ ಸಿಐಡಿಗೆ ವರ್ಗಾಯಿಸಲಾಗಿತ್ತು.
ಇನ್ನು ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಹಿನ್ನೆಲೆ ಬಾಲಕಿಯು ತೀವ್ರವಾಗಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications