• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಐಪಿಎಸ್ ಅಧಿಕಾರಿ ಈಗ ಎಸ್‌ಪಿ

|
Google Oneindia Kannada News

ಗುವಹಾಟಿ, ಮೇ 20: ಇತ್ತೀಚೆಗೆ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದ ಐಪಿಎಸ್ ಅಧಿಕಾರಿಯನ್ನು ಮೇ 14 ರಂದು ರಾಜ್ಯದ ಕಮ್ರೂಪ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಈ ಹಿಂದೆ ಈ ಅಧಿಕಾರಿಯು ಗುವಾಹಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವರ್ಷದ ಮಾರ್ಚ್ 31 ರಂದು ಈ ಐಪಿಎಸ್ ಅಧಿಕಾರಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 354 ಎ ಅಡಿಯಲ್ಲಿ ಹಾಗೂ ಪೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿತ್ತು. ಹಾಗೆಯೇ ಚಾರ್ಜ್‌ಶೀಟ್ ಅನ್ನು ಕಮ್ರೂಪ್ ಜಿಲ್ಲೆಯ ವಿಶೇಷ ನ್ಯಾಯಾಧೀಶರ ಮುಂದೆ ಸಲ್ಲಿಸಲಾಗಿತ್ತು.

ಈ ದೂರನ್ನು 2020 ರ ಜನವರಿ 3 ರಂದು ದಾಖಲಿಸಲಾಗಿದ್ದು ಅಸ್ಸಾಂ ಅಪರಾಧ ತನಿಖಾ ಇಲಾಖೆ ಈ ಪ್ರಕರಣದ ತನಿಖೆ ನಡೆಸಿದೆ. ಇನ್ನು ಚಾರ್ಜ್‌ಶೀಟ್‌ನಲ್ಲಿ, ಈ ಐಪಿಎಸ್ ಅಧಿಕಾರಿಯು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕಷ್ಟು ಪುರಾವೆಗಳು ದೊರೆತಿವೆ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.

ಆದರೆ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಜ್ಯೋತಿ ಮಹಂತಾ ಈ ವಿಷಯವು ಕಾನೂನಾತ್ಮಕವಾದುದು ಎಂದು ಹೇಳಿದ್ದಾರೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್‌ ಸಿದ್ದಪಡಿಸಲಾಗುವುದು. ನ್ಯಾಯಾಲಯವು ತೀರ್ಪು ನೀಡಿದರೆ, ಅವರನ್ನು ಬಂಧನಕ್ಕೆ ಒಳಪಡಿಸಲಾಗುವುದು. ಆದರೆ ನ್ಯಾಯಾಲಯ ತೀರ್ಪು ನೀಡುವವರೆಗೆ, ನಾವು ಅವರ ಸೇವೆಯನ್ನು ಬಳಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಈ ವರ್ಗಾವಣೆ ಆದೇಶವನ್ನು ರಾಜ್ಯ ಗೃಹ ಇಲಾಖೆ ಹೊರಡಿಸಿದೆ ಎಂದು ಡಿಜಿಪಿ ಮಹಂತಾ ತಿಳಿಸಿದ್ದಾರೆ.

2019 ರ ಡಿಸೆಂಬರ್ 31 ರಂದು ಆರೋಪಿಯಾದ ಐಪಿಎಸ್ ಅಧಿಕಾರಿಯ ನಿವಾಸದಲ್ಲಿ ಪಾರ್ಟಿಯೊಂದು ನಡೆದಿದ್ದು, ಈ ಸಂದರ್ಭದಲ್ಲಿ ಈ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿಯೂ ಆಗಿರುವ ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ 2020 ರ ಜನವರಿ 3 ರಂದು ಗುವಾಹಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ, ಪ್ರಕರಣವನ್ನು ಅಸ್ಸಾಂನ ಸಿಐಡಿಗೆ ವರ್ಗಾಯಿಸಲಾಗಿತ್ತು.

ಇನ್ನು ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಹಿನ್ನೆಲೆ ಬಾಲಕಿಯು ತೀವ್ರವಾಗಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

English summary
An IPS officer accused of sexually abusing a 13-year-old girl has been appointed as the Superintendent of Police in Assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X