• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ 25 ಕೋಟಿ ಮೌಲ್ಯದ ಹೆರಾಯಿನ್ ವಶ

|

ಗುವಾಹಟಿ, ಸೆಪ್ಟೆಂಬರ್ 28: ದೇಶದ ಹಲವೆಡೆ ಡ್ರಗ್ಸ್ ಸೇರಿದಂತೆ ವಿವಿಧ ರೀತಿಯ ಅಪಾಯಕಾರಿ ಮಾದಕ ವಸ್ತುಗಳ ಬೇಟೆ ಮುಂದುವರೆದಿದೆ. ಅನೇಕ ರಾಜ್ಯಗಳಲ್ಲಿ ಈ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಲವೆಡೆ ಡ್ರಗ್‌ ಪೆಡ್ಲರ್‌ಗಳು ಸೇರಿದಂತೆ ಭಾರೀ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಿನ್ನೆ ರಾತ್ರಿ ಅಸ್ಸಾಂ ಮತ್ತು ನಾಗಾಲ್ಯಾಂಡ್ ಗಡಿಯಲ್ಲಿ ಕಾರ್ಬಿ ಆಂಗ್ಲಾಂಗ್ ಪೊಲೀಸರು 5 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಲಾರಿಯಲ್ಲಿ ಕದ್ದು ಮುಚ್ಚಿ ಸಾಗಿಸುತ್ತಿದ್ದ ಹೆರಾಯಿನ್ ಸಾಗಾಣಿಕೆಯನ್ನು ಪತ್ತೆ ಹಚ್ಚಿದ ಪೊಲೀಸರು ಆ ಲಾರಿಯನ್ನು ತಡೆದು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆಗೆ ಗೈರಾದ ಅನುಶ್ರೀ: ಇಂದು ಹಾಜರಾಗಲು ಸೂಚನೆ

ವಶಕ್ಕೆ ಪಡೆದ ಹೆರಾಯಿನ್‌ನ ಮಾರುಕಟ್ಟೆ ಮೌಲ್ಯ ಸುಮಾರು 25 ಕೋಟಿ ರೂಪಾಯಿ ಆಗಿದ್ದು, ಈ ಕುರಿತಾಗಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

English summary
Karbi Anglong Police last night seized 5 kgs of heroin at Assam Nagaland border. Market value of the recovered heroin is said to be Rs 25 Crores.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X