7 ತಿಂಗಳ ಬಳಿಕ ಶಾಲೆಗಳನ್ನು ಆರಂಭಿಸಿದ ರಾಜ್ಯ ಸರ್ಕಾರ

ಗೌಹಾತಿ, ನವೆಂಬರ್ 02: ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ಮುಚ್ಚಲಾಗಿದ್ದ ಶಾಲೆಗಳನ್ನು ಅಸ್ಸಾಂ ಸರ್ಕಾರ ಸೋಮವಾರದಿಂದ ಆರಂಭಿಸಿದೆ. ಕೇಂದ್ರ ಗೃಹ ಇಲಾಖೆ ಶಾಲೆಗಳನ್ನು ತೆರೆಯುವ ಕುರಿತು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳನ್ನು ಸೋಮವಾರದಿಂದ ತೆರೆಯಲಾಗಿದೆ. 6 ರಿಂದ 12ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಬಹುದಾಗಿದೆ. ಕೋವಿಡ್ ಸೋಂಕು ಹರಡುವಿಕೆ ತಡೆಯಲು ಶಾಲೆಗಳಿಗೆ ವಿಶೇಷ ಮಾರ್ಗಸೂಚಿ ಹೊರಡಿಸಲಾಗಿದೆ.

6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಆಗಮಿಸಬಹುದು ಎಂದು ಅಸ್ಸಾಂ ಶಿಕ್ಷಣ ಇಲಾಖೆ ಹೇಳಿದೆ. ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.

Schools Reopen In Assam With Odd-Even System

ಸಮ-ಬೆಸದ ಮಾದರಿಯಲ್ಲಿ ಶಾಲೆಗಳಲ್ಲಿ ತರಗತಿಗಳನ್ನು ನಡೆಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಮಾಡಲಾಗಿದೆ. 7, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಮಾತ್ರ ಶಾಲೆಗಳಿಗೆ ಬರಬೇಕು.

6, 8 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರ ಶಾಲೆಗಳಿಗೆ ಬರಲಿದ್ದಾರೆ. 7, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಉಳಿದ ಮೂರು ದಿನಗಳ ಕಾಲ ಶಾಲೆಗಳಿಗೆ ಆಗಮಿಸಲಿದ್ದಾರೆ. ಪ್ರತಿ ದಿನ ಬೆಳಗ್ಗೆ 8 ರಿಂದ 12 ಮತ್ತು 12.30 ರಿಂದ 3.30ರ ತನಕ ತರಗತಿಗಳು ನಡೆಯಲಿವೆ.

ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ಶಾಲೆಗೆ ಆಗಮಿಸುವಂತಿಲ್ಲ. ಪ್ರತಿ ಶಾಲೆಯ ಆಡಳಿತ ಮಂಡಳಿ ಬೆಳಗ್ಗೆ ಮತ್ತು ಮಧ್ಯಾಹ್ನ ಎಂದು ಎರಡು ಬ್ಯಾಚ್‌ಗಳಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

ಅಸ್ಸಾಂನಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,06,517. ಭಾನುವಾರ ರಾಜ್ಯದಲ್ಲಿ166 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8,802.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+