• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಬಿಜೆಪಿಯಂತಲ್ಲ, ಚುನಾವಣೆ ವೇಳೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ: ರಾಹುಲ್ ಗಾಂಧಿ

|

ಗುವಾಹಟಿ, ಮಾರ್ಚ್ 31: ನಾವು ಬಿಜೆಪಿಯ ರೀತಿ ಅಲ್ಲ, ಚುನಾವಣೆ ಸಂದರ್ಭದಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಸ್ಸಾಂನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆ ವೇಳೆ ಜನರಿಗೆ ನೀಡುವ ಎಲ್ಲಾ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲಿದೆ ಎಂದು ಹೇಳಿದ್ದಾರೆ.

ಅಸ್ಸಾಂ: ಸಿಎಎ ಹೊರತಾಗಿ ಚಹಾ ಕಾರ್ಮಿಕರಿಗೆ ರಾಹುಲ್ ಗಾಂಧಿ ಸಿಹಿಸುದ್ದಿಅಸ್ಸಾಂ: ಸಿಎಎ ಹೊರತಾಗಿ ಚಹಾ ಕಾರ್ಮಿಕರಿಗೆ ರಾಹುಲ್ ಗಾಂಧಿ ಸಿಹಿಸುದ್ದಿ

ಗುವಾಹಟಿಯ ಕಾಮಖ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ಚುನಾವಣಾ ಪ್ರಚಾರದ ವೇಳೆ ನಾವು ಐದು ಭರವಸೆಗಳನ್ನು ನೀಡುತ್ತಿದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ನಾವು ಆ ಭರವಸೆಗಳನ್ನು ಈಡೇರಿಸುತ್ತೇವೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಅಸ್ಸಾಂನಲ್ಲಿ ಜಾರಿಗೆ ತರಲು ಬಿಡುವುದಿಲ್ಲ, ಐದು ಲಕ್ಷ ಯುವಕರಿಗೆ ಉದ್ಯೋಗ ನೀಡುವುದು, ರಾಜ್ಯದಲ್ಲಿರುವ ಪ್ರತೀ ಮನೆಗೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವುದು, ಗೃಹಿಣಿಯರಿಗೆ ಮಾಸಿಕ ನೆರವು ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಪಂಜಾಬ್, ಛತ್ತೀಸ್‌ಗಢ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಆ ಭರವಸೆಯನ್ನು ಈಡೇರಿಸುತ್ತೇವೆಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಚಹಾ ತೋಟ ಕಾರ್ಮಿಕರ ದಿನಗೂಲಿಯನ್ನು 365 ರೂಗಳಿಗೆ ಹೆಚ್ಚಿಸುವ ಭರವಸೆ ನೀಡಿದ್ದೇವೆ. ಅಧಿಕಾರಕ್ಕೆ ಬಂದರೆ ಅದನ್ನು ಈಡೇರಿಸುತ್ತೇವೆ ಎಂದರು.

ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯದಿದೆ. ಏಪ್ರಿಲ್.1ರಂದು 39 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

English summary
Rahul Gandhi said that unlike the BJP his party keeps the promises made to the people during the elections.:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X