• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ: ಬುಡಕಟ್ಟು ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಪ್ರಿಯಾಂಕಾ ಗಾಂಧಿ

|

ಗುವಾಹಟಿ, ಮಾರ್ಚ್‌ 01: ಅಸ್ಸಾಂ ವಿಧಾನಸಭೆ ಚುನಾವಣೆ ಮಾರ್ಚ್ 27ರಿಂದ ಆರಂಭವಾಗಲಿದ್ದು, ರಾಜ್ಯದಲ್ಲಿ ಚುನಾವಣೆಗೆ ಸಿದ್ಧತೆಗಳು ಸಾಗಿವೆ. ಚುನಾವಣಾ ಪ್ರಚಾರದ ಪ್ರಯುಕ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯಕ್ಕೆ ಎರಡು ದಿನಗಳ ಪ್ರವಾಸದಲ್ಲಿದ್ದಾರೆ.

ಅಸ್ಸಾಂ ವಿಧಾನಸಭೆ ಚುನಾವಣೆ 2021: ದಿನಾಂಕ, ಕ್ಷೇತ್ರಗಳ ವಿವರ...ಅಸ್ಸಾಂ ವಿಧಾನಸಭೆ ಚುನಾವಣೆ 2021: ದಿನಾಂಕ, ಕ್ಷೇತ್ರಗಳ ವಿವರ...

ಸೋಮವಾರ ಅಸ್ಸಾಂನ ಲಖಿಂಪುರಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ, ಇಲ್ಲಿನ ಬುಡಕಟ್ಟು ಮಕ್ಕಳೊಂದಿಗೆ ಸೇರಿ ಹೆಜ್ಜೆ ಹಾಕಿದ್ದಾರೆ. ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ "ಝುಮುರ್" ನೃತ್ಯ ಮಾಡಿದ್ದು, ಜನರು ತಮ್ಮ ಚಪ್ಪಾಳೆಯೊಂದಿಗೆ ಪ್ರಿಯಾಂಕಾ ಅವರಿಗೆ ಹುರುಪು ನೀಡಿದ್ದಾರೆ.

ನೂರಾರು ಜನರು ಪ್ರಿಯಾಂಕಾ ಗಾಂಧಿ ಅವರನ್ನು ಸುತ್ತುವರೆದಿದ್ದು, ಡೋಲಿನ ತಾಳಕ್ಕೆ ಹಾಗೂ ಯುವತಿಯರ ಹಾಡಿಗೆ ಪ್ರಿಯಾಂಕಾ ಖುಷಿಯಿಂದ ಹೆಜ್ಜೆ ಹಾಕಿರುವ ಒಂದು ನಿಮಿಷ ಅವಧಿಯ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. ಈ ಹಿಂದೆಯೂ ಅಸ್ಸಾಂಗೆ ಭೇಟಿ ನೀಡಿದ್ದ ಪ್ರಿಯಾಂಕಾ ಗಾಂಧಿ, ಇಲ್ಲಿನ ಐತಿಹಾಸಿಕ ಕಾಮಾಕ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಮತ್ತೊಮ್ಮೆ ದೇಗುಲಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್‌ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ 33,530 ಮತದಾನ ಕೇಂದ್ರಗಳು ನಿಗದಿಯಾಗಿದೆ.

English summary
Assam assembly election 2021: Congress general secretary priyanka gandhi vadra danced with tea tribes in lakhimpur of assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X