ಬಜೆಟ್; ಹಾಸನ-ಬೇಲೂರು-ಚಿಕ್ಕಮಗಳೂರು ಮಾರ್ಗಕ್ಕೆ ಅನುದಾನ
ಹಾಸನ, ಫೆಬ್ರವರಿ 5; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈಲ್ವೆ ಇಲಾಖೆಗೆ ನಿಗದಿ ಮಾಡಿರುವ ಅನುದಾನದ ವಿವರಗಳಿರುವ ಪಿಂಕ್ ಬುಕ್ ಅನ್ನು ಇಲಾಖೆ ಬಿಡುಗಡೆ ಮಾಡಿದೆ. ಬಹು ನಿರೀಕ್ಷಿತ ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ ನೀಡಲಾಗಿದೆ.
ಹಾಸನ-ಬೇಲೂರು-ಚಿಕ್ಕಮಗಳೂರು ನೂತನ ರೈಲು ಮಾರ್ಗ ನಿರ್ಮಾಣಕ್ಕೆ 1000 ಕೋಟಿ ಅನುದಾನ ನೀಡಲಾಗಿದೆ. ಮಹತ್ವದ ರೈಲು ಮಾರ್ಗಕ್ಕೆ ಈ ಅನುದಾನ ಕಡಿಮೆಯಾಯಿತು ಎಂಬ ಆಕ್ಷೇಪಗಳು ಕೇಳಿ ಬಂದಿವೆ.
ಬೆಂಗಳೂರು ಮತ್ತು ಮೈಸೂರು ನಗರವನ್ನು ಸಂಪರ್ಕಿಸುವ ಚಿಕ್ಕಮಗಳೂರು ನೇರ ರೈಲು ಸಂಪರ್ಕ ಯೋಜನೆ ಮಹತ್ವದ್ದಾಗಿದೆ. ಈ ಮಾರ್ಗಕ್ಕೆ ಮಂಜೂರಾತಿ ದೊರೆತು ನಾಲ್ಕು ವರ್ಷಗಳು ಕಳೆದರೂ ಅನುದಾನ ಮಾತ್ರ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪವೂ ಇದೆ.

ಚಿಕ್ಕಮಗಳೂರು-ಬೇಲೂರು ನಡುವಿನ ಭೂ ಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಹಾಸನ-ಬೇಲೂರು ನಡುವಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಆದರೂ ಬಜೆಟ್ನಲ್ಲಿ ಸರಿಯಾಗಿ ಅನುದಾನ ನಿಗದಿ ಮಾಡಿಲ್ಲ ಎಂದು ಆರೋಪಿಸಲಾಗುತ್ತಿದೆ.
ವಿದ್ಯುದೀಕರಣಕ್ಕೆ 162.6 ಕೋಟಿ; ಹಾಸನ ಜಿಲ್ಲೆಯನ್ನು ಸಂಪರ್ಕಿಸುವ ಒಟ್ಟು 2 ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ಒಟ್ಟು 162.6 ಕೋಟಿ ರೂ.ಗಳನ್ನು ನಿಗದಿ ಮಾಡಲಾಗಿದೆ. ಚಿಕ್ಕಬಣಾವರ-ಹಾಸನ ಮಾರ್ಗದ ವಿದ್ಯುದೀಕರಣಕ್ಕೆ 50.6 ಕೋಟಿ ರೂ.ಗಳು.
ಮೈಸೂರು-ಹಾಸನ-ಮಂಗಳೂರು ನಡುವಿನ 347 ಕಿ. ಮೀ. ವಿದ್ಯುದೀಕರಣಕ್ಕೆ 112 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications