Karnataka Rain: ಹಾಸನದಲ್ಲಿ ಭತ್ತ ನಾಟಿ ಮಾಡುವಾಗ ಬಡಿದ ಸಿಡಿಲು: 15 ಮಂದಿ ಆಸ್ಪತ್ರೆಗೆ ದಾಖಲು

ಗದ್ದೆಯಲ್ಲಿ ಭತ್ತ ನಾಟಿ ಮಾಡುವಾಗ ಸಿಡಿಲು ಬಡಿದು 15 ಮಂದಿ ಅಸ್ವಸ್ಥರಾಗಿದ್ದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆ ಸ್ಥಿತಿ ಗಂಭೀರವಾಗಿದೆ. ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೊರ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೆಬಿ ಚಂದ್ರು ಎನ್ನುವವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಕೆಲಸಗಾರರು ಭತ್ತ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಮಿಂಚು ಸಹಿತ ಏಕಾಏಕಿ ಮಳೆ ಶುರುವಾಗಿದೆ. ಮಳೆಯ ನಡುವೆಯೂ ಮಹಿಳೆಯರು ಭತ್ತದ ನಾಟಿ ಮಾಡುತ್ತಿದ್ದರು ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ.

15 Workers Injured by Lightning Strike in Hassan Paddy Field

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ, ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದ್ದು ಎಲ್ಲರನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+