ಹಾಸನ: 2 ಬಸ್ ಮುಖಾಮುಖಿ ಡಿಕ್ಕಿ, 3ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

Posted By:
Subscribe to Oneindia Kannada

ಹಾಸನ, ಡಿಸೆಂಬರ್ 5 : ಕೆಎಸ್ ಆರ್ ಟಿಸಿ. ಹಾಗೂ ಖಾಸಗಿ ವೋಲ್ವೋ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ (ಮಂಗಳವಾರ) ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಕೆಎಸ್ಆರ್‌ಟಿಸಿ ಬಸ್ ಪ್ರಯಾಣಿಕರ ಸಹಾಯಕ್ಕಾಗಿ ಬಂತು 'ಬಸ್ ಮಿತ್ರ'

ಫಾತಿಮಾ(27), ಅಬ್ದುಲ್ ಸಲಾಂ(54) ಮೃತಪಟ್ಟವರೆಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

2 killed, 10 injured in a two bus collision in Heddurga Hassan district

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ. ವೋಲ್ವೋ ಬಸ್ ನಡುವೆ ಡಿಕ್ಕಿಯಾಗಿದೆ.

ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದರು. ಬಳಿಕ ಸಂಚಾರ ವ್ಯವಸ್ಥೆ ಸರಿಯಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two killed, 10 injured in a collision between KSRTC and Durgamba private bus in Heddurga village, Hassan district on December 5.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ