Siddaramaiah: ಸಿಎಂ ಸಿದ್ದರಾಮಯ್ಯ ಕೊರಳಿಗೆ ಉಚಿತ ಬಸ್ ಟಿಕೆಟ್‌ಗಳ ಹಾರ ಹಾಕಿದ ವಿದ್ಯಾರ್ಥಿನಿ
ಬೆಂಗಳೂರು, ಏಪ್ರಿಲ್. 23: ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ರಾಜ್ಯದ ಮಹಿಳೆಯರಿಗೆ ಸರ್ಕಾರದ ಸಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆ ಯಶಸ್ವಿಯಾಗಿದೆ. ಹಲವು ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳನ್ನೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುತ್ತಿದೆ. ಪ್ರಚಾರ ಸಮಾವೇಶಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ನಿನ್ನೆ ನಡೆದ ಹಾಸನ ಲೋಕಸಭಾ ಕ್ಷೇತ್ರದ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ವಿದ್ಯಾರ್ಥಿಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ.

ಉಚಿತ ಬಸ್ ಟಿಕೆಟ್‌ಗಳ ಹಾರ!
ಅರಸೀಕೆರೆಯ ಕಾನೂನು ವಿದ್ಯಾರ್ಥಿನಿ ಜಯಶ್ರೀ ಇಷ್ಟು ದಿನ ತಾವು ಬಸ್‌ಗಳಲ್ಲಿ ಪ್ರಯಾಣ ಮಾಡುವಾಗ ಪಡೆದ ಉಚಿತ ಬಸ್ ಟಿಕೆಟ್‌ಗಳನ್ನೇಲ್ಲಾ ಕೂಡಿಟ್ಟು, ಸುಂದರವಾದ ಹಾರ ತಯಾರಿಸಿದ್ದಾರೆ. ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಹಾಕಿ ಧನ್ಯವಾದ ತಿಳಿಸಿದ್ದಾರೆ.
"ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ..? ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು" ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
"ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು" ಎಂದು ಜಯಶ್ರೀ ಮಾತುಗಳನ್ನು ಮತ್ತು ಹಾರದ ಪೋಟೋಗಳನ್ನು ಶೇರ್ ಮಾಡಿದ್ದಾರೆ.

ಮುಂದುವರಿದು, "ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು ಎಂದು ಹಾರೈಸಿದೆ" ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಹಾಸನದಲ್ಲಿ ಸಿಎಂ ಶಕ್ತಿ ಪ್ರದರ್ಶನ
ಹಾಸನ ಲೋಕಸಭಾ ಕ್ಷೇತ್ರದ ಅರಸೀಕೆರೆಯಲ್ಲಿ ನಡೆದ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಿದ್ದಾರೆ. "ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ಶ್ರೇಯಸ್ಸು ದೇವೇಗೌಡರದ್ದಾಗಿದೆ. ಅರಸೀಕೆರೆ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಿ ಬಚಾವಾದರು. ಶಿವಲಿಂಗೇಗೌಡರು ಕ್ಷೇತ್ರದ ಅಭಿವೃದ್ದಿಗೆ ಕೇಳುವ ಎಲ್ಲಾ ಕೆಲಸಗಳಿಗೆ ಸಹಿ ಹಾಕಲು ನಾನು ಸಿದ್ಧನಿದ್ದೇನೆ. ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿಯನ್ನೂ ನನಗೆ ಬಿಡಿ, ಇದಕ್ಕಾಗಿ ಶ್ರೇಯಸ್ ಪಟೇಲ್ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಡಿ ಸಾಕು" ಎಂದು ಮನವಿ ಮಾಡಿದ್ದಾರೆ.
"ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಎದ್ವಾತದ್ವಾ ಹೊಗಳುತ್ತಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದ ದೇವೇಗೌಡರೇ, ಈಗ ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಹೊಗಳುತ್ತಿದ್ದಾರೆ" ಎಂದು ಟೀಕಿಸಿದ್ದಾರೆ.
"ದೇವೇಗೌಡರ ಅಳಿಯ ಬೆಂಗಳೂರು ಗ್ರಾಮಾಂತರದಲ್ಲಿ, ಮಗ ಮಂಡ್ಯದಲ್ಲಿ, ಮೊಮ್ಮಗ ಹಾಸನದಲ್ಲಿ ಸ್ಪರ್ಧಿಸಿದ್ದಾರೆ. ಇವರಿಗೆ ತಮ್ಮ ಕುಟುಂಬದ ಆಚೆ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಮನೆಗೆ ಕಳುಹಿಸಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿಕೊಡಿ" ಎಂದು ಮತದಾರರಲ್ಲಿ ಕೇಳಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications