ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸೇರುವ ಬಗ್ಗೆ ಮಾಜಿ ಸಚಿವ ಎ.ಮಂಜು ಹೇಳಿದ್ದೇನು?

|
Google Oneindia Kannada News

Recommended Video

Lok Sabha Elections 2019 : ಬಿಜೆಪಿ ಸೇರುವ ಬಗ್ಗೆ ಮಾಜಿ ಸಚಿವ ಎ.ಮಂಜು ಹೇಳಿದ್ದೇನು?

ಹಾಸನ, ಮಾರ್ಚ್ 11 : 'ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಕಣಕ್ಕಿಳಿದರೆ, ನಮ್ಮ ಹಿತೈಷಿಗಳು, ಕಾರ್ಯಕರ್ತರ ಜೊತೆ ಮಾತನಾಡಿದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ' ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎ.ಮಂಜು ಹೇಳಿದರು.

ಎ.ಮಂಜು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈಗಾಗಲೇ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಹಾಸನ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜುಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜು

ಕಾಂಗ್ರೆಸ್-ಜೆಡಿಎಸ್ ಮೈತ್ರಿಯಂತೆ ಹಾಸನ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಕಾಂಗ್ರೆಸ್ ನಾಯಕ ಎ.ಮಂಜು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣ

ಹಾಸನ ಕ್ಷೇತ್ರದ ಹಾಲಿ ಸಂಸದರು ಎಚ್.ಡಿ.ದೇವೇಗೌಡ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದರೆ, ಎ.ಮಂಜು ಅವರು ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ...

ಶಾಸ್ತ್ರ ಕೇಳಿದ್ದೇವೆ, ಕನ್ನಡಿಗರೇ ಮತ್ತೆ ಪ್ರಧಾನಿ ಅನ್ಬೇಡಿ; ಎ ಮಂಜು ಭರ್ಜರಿ ಟಾಂಗ್ಶಾಸ್ತ್ರ ಕೇಳಿದ್ದೇವೆ, ಕನ್ನಡಿಗರೇ ಮತ್ತೆ ಪ್ರಧಾನಿ ಅನ್ಬೇಡಿ; ಎ ಮಂಜು ಭರ್ಜರಿ ಟಾಂಗ್

ದೇವೇಗೌಡರೇ ಕಣಕ್ಕಿಳಿಯಬೇಕು

ದೇವೇಗೌಡರೇ ಕಣಕ್ಕಿಳಿಯಬೇಕು

'ನನಗೆ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡಬೇಕು ಎಂಬ ಆಸೆ ಇದೆ. ಹಾಗಾಗಿ ಅವರೇ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದೇನೆ. ರಾಜಕಾರಣ ಎಂದಿಗೂ ನಿಂತ ನೀರಲ್ಲ. ಬೇರೆಯವರು ಅಭ್ಯರ್ಥಿಯಾದರೆ ಮುಂದೆ ಆಲೋಚನೆ ಮಾಡೋಣ' ಎಂದು ಎ.ಮಂಜು ಹೇಳಿದರು.

ಬಿಜೆಪಿ ನಾಯಕರ ಜೊತೆ ಮಾತನಾಡಿದ್ದೇನೆ

ಬಿಜೆಪಿ ನಾಯಕರ ಜೊತೆ ಮಾತನಾಡಿದ್ದೇನೆ

'ಬಿಜೆಪಿ ನಾಯಕರ ಜೊತೆ ಈಗಾಗಲೇ ಮಾತನಾಡಿದ್ದೇನೆ. ದೋಸ್ತಿ ಅಭ್ಯರ್ಥಿಯಾಗಿ ದೇವೇಗೌಡರು ನಿಲ್ಲಲಿ ಎಂದು ಮನವಿ ಮಾಡಿದ್ದೇನೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ಕಣಕ್ಕಿಳಿದರೆ ನನ್ನ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ' ಎಂದು ಎ.ಮಂಜು ತಿಳಿಸಿದರು.

ಕಾರ್ಯಕರ್ತರು ಹೇಳಿದರೆ ಸಾಕು

ಕಾರ್ಯಕರ್ತರು ಹೇಳಿದರೆ ಸಾಕು

'ನಮ್ಮ ಹಿತೈಷಿಗಳು ಕಾರ್ಯಕರ್ತರ ಜೊತೆ ಮಾತನಾಡಿ ನಾನು ಮುಂದಿನ ನಡೆ ಬಗ್ಗೆ ತೀರ್ಮಾನವನ್ನು ಕೈಗೊಳ್ಳುತ್ತೇನೆ. ನಮ್ಮ ಕಾರ್ಯಕರ್ತರು ಹೇಳಿದರೆ ಅದು ಪಕ್ಕಾ ಇರುತ್ತದೆ. ಅವರ ಸಲಹೆಯಂತೆಯೇ ಮುಂದುವರೆಯುವೆ' ಎಂದು ಎ.ಮಂಜು ಹೇಳಿದರು.

ಹಾಸನದಲ್ಲಿ ಬಿಜೆಪಿಗೆ ಶಕ್ತಿ

ಹಾಸನದಲ್ಲಿ ಬಿಜೆಪಿಗೆ ಶಕ್ತಿ

ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಸಂಘಟನೆಯ ಕೊರತೆಯನ್ನು ಎದುರಿಸುತ್ತಿದೆ. ಎಂ.ಮಂಜು ಅವರನ್ನು ಕರೆದುಕೊಂಡು ಬಂದರೆ ಬಿಜೆಪಿಗೆ ಶಕ್ತಿ ಸಿಗಲಿದೆ. ಮಾಜಿ ಸಚಿವ ಸಿ.ಟಿ.ರವಿ, ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಮಂಜು ಅವರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

ಬಿಜೆಪಿಗೆ ವಾಪಸ್

ಬಿಜೆಪಿಗೆ ವಾಪಸ್

ಶನಿವಾರ ಎ.ಮಂಜು ಅವರು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಜು ಅವರು ಹಿಂದೆ ಬಿಜೆಪಿಯಲ್ಲಿದ್ದರು. ವಿಜಯ್ ಮಲ್ಯ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡಿದಾಗ ಅಡ್ಡಮತದಾನ ಮಾಡಿದರು ಎಂಬ ಕಾರಣಕ್ಕೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

English summary
Former minister and Congress leader Arakalagudu Manju (A.Manju) may join BJP and contest for 2019 Lok sabha elections from Hassan seat. His clarification on joining BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X