ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರದಿಂದ ಶಾಶ್ವತ ಪರಿಹಾರ

|
Google Oneindia Kannada News

ಹಾಸನ, ಏಪ್ರಿಲ್‌ 27: ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವರಾದ ಆರ್.ಅಶೋಕ‌ ಅವರು ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

A permanent solution to the problems of coffee growers by the state government

ಕಾಫಿ ಬೆಳೆಗಾರರ ಭೂಮಿ ಎಷ್ಟು ಒತ್ತುವರಿಯಾಗಿದೆ ಮೊದಲಾದ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಶೀಘ್ರವೇ ಸೂಕ್ತವಾದ ನ್ಯಾಯವನ್ನು ಕೊಡಲಾಗುವುದು ಎಂದರು.

A permanent solution to the problems of coffee growers by the state government

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಆಶೋಕ, ಶಾಸಕ‌ ಪ್ರೀತಂಗೌಡ, ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್.ಸಿ. ಮೋಹನ್, ಹಾಸನ‌ ಜಿಲ್ಲಾ ಅಧ್ಯಕ್ಷ ‌ಸುಬ್ರಮಣ್ಯ,ಮತ್ತು ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

English summary
K Gopalaiah, Minister in charge of the district said that the state government will provide a permanent solution to the problems of coffee growers,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X