Breaking: ಹಾಸನದಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ 4 ವಿದ್ಯಾರ್ಥಿಗಳು ಸಾವು
ಹಾಸನ, ಮಾರ್ಚ್ 22: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸಾರಿಗೆ ಬಸ್ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು, ವಿದ್ಯಾವಿಕಾಸ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಸ್ಥಳಕ್ಕೆ ಬೇಲೂರು ಗ್ರಾಮಾಂತರ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಸಾರಿಗೆ ಬಸ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಪ್ರಕರಣದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಡಿಕ್ಕಿ ರಭಸಕ್ಕೆ ಶವಗಳು ಕಾರಿನಲ್ಲಿ ಸಿಲುಕಿಕೊಂಡಿದ್ದು, ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.












Click it and Unblock the Notifications