ಎಡಿಜಿಪಿ ಚಂದ್ರಶೇಖರ್ ಆಕ್ಷೇಪಾರ್ಹ ಪದ ಬಳಕೆ ಆರೋಪ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ
ಹಾಸನ ಅಕ್ಟೋಬರ್ 3: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಆಕ್ಷೇಪಾರ್ಹ ಪದ ಬಳಕೆಯನ್ನು ಖಂಡಿಸಿ ಹಾಸನದಲ್ಲಿಂದು ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಜೆಡಿಎಸ್ ಕಾರ್ಯಕರ್ತರು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹಾಸನ ನಗರದ ಹೇಮಾವತಿ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಎಡಿಜಿಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಎದುರು ಕೆಲಕಾಲ ಧರಣಿ ನಡೆಸಿದರು.

ಹೆಚ್‌ಡಿ ಕುಮಾರಸ್ವಾಮಿ ಅವರ ವಿರುರ್ದದ ಅಸಂವಿಧಾನಿಕ ಪದ ಬಳಕೆ ಚಂದ್ರಶೇಖರ್ ಅವರು ಮಾಡಿದ್ದಾರೆ. ಇಂತಹ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿಗೆ ಹಾಗೂ ನಾಡಿನ ಜನತೆಗೆ ಕೂಡಲೆ ಕ್ಷಮೆ ಕೇಳಬೇಕು. ಚಂದ್ರಶೇಖರ್ ಅಧಿಕಾರಿಯಾಗಿದ್ದು ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಭ್ರಷ್ಟಾಚಾರ ಆರೋಪ ಬಗ್ಗೆ ತನಿಖೆ ಆಗಬೇಕೆಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿ ಚಂದ್ರಶೇಖರ್ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.
ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಎಡಿಜಿಪಿ ಚಂದ್ರಶೇಖರ್ ಅವರನ್ನು ಅಮಾನತು ಮಾಡುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಶಾಸಕರುಗಳಾದ ಎ.ಮಂಜು, ಸಿ.ಎನ್.ಬಾಲಕೃಷ್ಣ, ಎಚ್.ಪಿ.ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಭಾಗಿಯಾಗಿದ್ದರು.
ಅಲ್ಲದೆ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ 'ಹಂದಿ' ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರೆ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ''ಹೆಚ್‌ಡಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಮತ್ರಿಯಾಗಿದ್ದವರು. ಸದ್ಯ ಕೇಂದ್ರ ಸಚಿವರೂ ಎಂಬುದನ್ನೂ ಲೆಕ್ಕಿಸದೇ ಎಡಿಜಿಪಿ ಎಂ. ಚಂದ್ರಶೇಖರ್ ಅವರು ಬಳಸಿರುವ ಪದಗಳು ಅನುಚಿತವಾಗಿದೆ. ಕೇಂದ್ರದ ಸಚಿವರನ್ನೇ ವೆದರಿಸಲು ಹೊರಟಿರುವ ಅವರ ವರ್ತನೆ ಪ್ರಜಾಪ್ರಭುತ್ವವನ್ನೇ ಅಣಿಕಿಸಿದ ಅಕ್ಷಮ್ಯ ನಡೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಚಿಕ್ಕಬಳ್ಳಾಪುರ, ಗದಗ ಸೇರಿದಂತೆ ರಾಜ್ಯದ ಹಲವೆಡೆ ಎಂ. ಚಂದ್ರಶೇಖರ್ ಅವರು ಬಳಸಿದ ಪದಕ್ಕೆ ಖಂಡನೆ ವ್ಯಕ್ತವಾಗಿದೆ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕೆಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.












Click it and Unblock the Notifications