• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಾಸನ ವಿಮಾನ ನಿಲ್ದಾಣ ಜಾಗದ; ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆ

|

ಹಾಸನ, ಮಾರ್ಚ್ 01: ಹಾಸನದ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂಧನ ಇಲಾಖೆ ಹಾಗೂ ಮೂಲ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಹಾಸನದ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ

ಉದ್ದೇಶಿತ ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ವಿಮಾನ ನಿಲ್ದಾಣಕ್ಕೆ ಈಗಾಗಲೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

 ಹಾಸನ: 200 ಕೋಟಿ ವೆಚ್ಚದಲ್ಲಿ14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ ಹಾಸನ: 200 ಕೋಟಿ ವೆಚ್ಚದಲ್ಲಿ14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ

ವಿಮಾನ ನಿಲ್ದಾಣದ ಅಕ್ಕ ಪಕ್ಕದ ಎರಡು ಬದಿಯಲ್ಲಿ 3 ರಿಂದ 4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಮಾರ್ಗಗಳು ಇರುವಂತಿಲ್ಲ. ಆದ್ದರಿಂದ, ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆ ಕೊಡಲಾಗಿದೆ.

 ಲಗೇಜ್ ಇಲ್ಲದಿದ್ದರೆ ಕಡಿಮೆಯಾಗಲಿದೆ ವಿಮಾನ ಪ್ರಯಾಣ ದರ; ಇಲ್ಲಿದೆ ಮಾಹಿತಿ... ಲಗೇಜ್ ಇಲ್ಲದಿದ್ದರೆ ಕಡಿಮೆಯಾಗಲಿದೆ ವಿಮಾನ ಪ್ರಯಾಣ ದರ; ಇಲ್ಲಿದೆ ಮಾಹಿತಿ...

ಕೆಪಿಟಿಸಿಎಲ್ ಮುಖ್ಯ ಇಂಜಿನಿಯರ್ ನಾಗಾರ್ಜುನ ಅವರು ಮಾತನಾಡಿದ್ದು, "ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ವ್ಯಾಪ್ತಿಯಲ್ಲಿ ಒಟ್ಟು 68 ಟವರ್‌ಗಳಿವೆ. 6 ರಿಂದ 7 ತಿಂಗಳೊಳಗೆ ವಿದ್ಯುತ್ ಮಾರ್ಗ ತೆರವುಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.

ಸರ್ಕಾರದ ಹಂತದಲ್ಲಿ ಹಾಸನ ವಿಮಾನ ನಿಲ್ದಾಣ ಪ್ರಾರಂಭಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲು ಒಪ್ಪಿಗೆ ನೀಡಬೇಕು ಎಂದು ಹಾಸನ ಶಾಸಕ ಪ್ರೀತಂ ಗೌಡ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ದಶಕಗಳ ಕನಸು; ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ದಶಕಗಳ ಕನಸು. ಬೂವನಹಳ್ಳಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಪ್ರಸ್ತಾವನೆಯ ಕಡತ ಸಿದ್ದಗೊಂಡು ದಶಕಗಳು ಕಳೆದರೂ ರಾಜಕೀಯ ಕಾರಣಗಳಿಗಾಗಿ ಅದು ಮುಂದಕ್ಕೆ ಸಾಗಿಲ್ಲ.

   ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್‌ ಪೋರ್ಟಲ್‌..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada

   1965ರಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 150 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಎಚ್. ಡಿ. ದೇವೇಗೌಡರು ಯೋಜನೆ ಬಗ್ಗೆ ಆಸಕ್ತಿ ತೋರಿದಾಗ 536 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳಲಾಯಿತು. ಆದರೆ, ಕಡತಗಳು ಮಾತ್ರ ಮುಂದಕ್ಕೆ ಹೋಗದೆ ಯೋಜನೆ ಕುಂಟುತ್ತಾ ಸಾಗಿದೆ.

   English summary
   Principal secretary of infrastructure department Kapil Mohan inspected Hassan airport project land. He directed the officials to shift high tension line near land.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X