ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭೆ ಚುನಾವಣೆ ಮೈತ್ರಿಗೆ ಮುನಿಸು : ಎ.ಮಂಜು ಬಿಜೆಪಿಗೆ?

By Gururaj
|
Google Oneindia Kannada News

ಹಾಸನ, ಜುಲೈ 24 : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಹಾಸನ ಕಾಂಗ್ರೆಸ್‌ನಲ್ಲಿ ಮೈತ್ರಿಗೆ ಅಪಸ್ವರ ಕೇಳಿ ಬಂದಿದೆ. ಹಾಸನ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂಬುದು ಜಿಲ್ಲಾ ಕಾಂಗ್ರೆಸ್ ನಾಯಕರ ಬೇಡಿಕೆ.

ಮಾಜಿ ಸಚಿವ ಎ.ಮಂಜು ನೇತೃತ್ವದ ನಿಯೋಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಹಾಸನ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಮನವಿ ಮಾಡಿದೆ.

ಹಾಸನ, ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಬೇಡಿ!ಹಾಸನ, ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಬೇಡಿ!

ಮತ್ತೊಂದು ಕಡೆ ಒಂದು ವೇಳೆ ಹಾಸನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಎ.ಮಂಜು ಕಾಂಗ್ರೆಸ್‌ ತೊರೆಯಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಎ.ಮಂಜು ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳುಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳು

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಹಾಸನ ಜೆಡಿಎಸ್ ಪಾಲಾದರೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಳ್ಳಬಹುದು. ಇದನ್ನು ಉಪಯೋಗಿಸಿಕೊಂಡು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಹಾಸನದ ಹಾಲಿ ಸಂಸದರು ಎಚ್.ಡಿ.ದೇವೇಗೌಡ, ಈ ಬಾರಿ ಚುನಾವಣೆಗೆ ಅವರು ಸ್ಪರ್ಧಿಸಲಿದ್ದಾರೆಯೇ? ಕಾದು ನೋಡಬೇಕು...

ಎ.ಮಂಜು ಹೇಳಿದ್ದೇನು?

ಎ.ಮಂಜು ಹೇಳಿದ್ದೇನು?

ಮಾಜಿ ಸಚಿವ ಎ.ಮಂಜು ಸೋಮವಾರ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದರು. ಹಾಸನವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಒತ್ತಾಯಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿದ್ದೇವೆ. ನಮಗೆ ಸರ್ಕಾರಕ್ಕಿಂತಲೂ ಪಕ್ಷದ ಪ್ರಶ್ನೆ ಮುಖ್ಯ' ಎಂದು ಹೇಳಿದರು.

ಬಿಜೆಪಿ ಸೇರಲಿದ್ದಾರೆ ಮಂಜು?

ಬಿಜೆಪಿ ಸೇರಲಿದ್ದಾರೆ ಮಂಜು?

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೆ ಎ.ಮಂಜು ಬಿಜೆಪಿ ಸೇರಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೆ ತಾವು ಬೆಂಬಲ ನೀಡುವುದಿಲ್ಲ ಎಂಬುದು ಎ.ಮಂಜು ಅವರ ವಾದ.

ಎ.ಮಂಜು ದೇವೇಗೌಡ ಕುಟುಂಬದ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಅರಕಲಗೋಡು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಜೆಡಿಎಸ್ ಭದ್ರಕೋಟೆ ಹಾಸನ

ಜೆಡಿಎಸ್ ಭದ್ರಕೋಟೆ ಹಾಸನ

ಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕ್ಷೇತ್ರದ ಹಾಲಿ ಸಂಸದರು. ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾದರೂ ಜೆಡಿಎಸ್‌ ಹಾಸನ ಜಿಲ್ಲೆಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವುದು ಸಾಧ್ಯವಿಲ್ಲ ಎಂಬುದು ಸದ್ಯದ ಮಾತು.

2019ರ ಚುನಾವಣೆಗೆ ದೇವೇಗೌಡರು ಸ್ಪರ್ಧಿಸಲಿದ್ದಾರೆಯೇ ಕಾದು ನೋಡಬೇಕು. ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಲಿದ್ದಾರೆ. ದೇವೇಗೌಡಡು ಸ್ಪರ್ಧೆ ಮಾಡುವುದಿಲ್ಲ ಎಂಬುದು ಸದ್ಯ ಹಬ್ಬಿರುವ ಸುದ್ದಿಯಾಗಿದೆ.

ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿಲ್ಲ

ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿಲ್ಲ

ಹಾಸನ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚು ಪ್ರಬಲವಾಗಿಲ್ಲ. ಈ ಬಾರಿ ಕಾಂಗ್ರೆಸ್‌-ಜೆಡಿಎಸ್ ಒಂದಾದರೆ ಬಿಜೆಪಿಗೆ ಇನ್ನಷ್ಟು ಹಿನ್ನಡೆ ಉಂಟಾಗಲಿದೆ. ಒಂದು ವೇಳೆ ಎ.ಮಂಜು ಕಾಂಗ್ರೆಸ್‌ ತೊರೆದರೆ ಬಿಜೆಪಿ ಸೇರಿ ಅಭ್ಯರ್ಥಿಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

2014ರ ಚುನಾವಣೆಯಲ್ಲಿ ಸಿ.ಎಚ್.ವಿಜಯಶಂಕರ್ ಮೈಸೂರು ಬಿಟ್ಟು ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 1,65,688 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ, ಈಗ ಅವರು ಬಿಜೆಪಿಯಲ್ಲಿಲ್ಲ.

ಎ.ಮಂಜು ಸೋತಿದ್ದರು

ಎ.ಮಂಜು ಸೋತಿದ್ದರು

2014ರ ಲೋಕಸಭೆ ಚುನಾವಣೆಯಲ್ಲಿ ಎ.ಮಂಜು ಹಾಸನದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಪಶುಸಂಗೋಪನಾ ಸಚಿವರಾಗಿದ್ದ ಅವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ.

2014ರಲ್ಲಿ ಎಚ್.ಡಿ.ದೇವೇಗೌಡ 50981 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಎ.ಮಂಜು ಅವರು 409379 ಮತಗಳನ್ನು ಪಡೆದಿದ್ದರು. ಬಿಜೆಪಿಯ ಸಿ.ಎಚ್.ವಿಜಯಶಂಕರ್1,65,688 ಮತಗಳನ್ನು ಪಡೆದಿದ್ದರು.

English summary
Former Minister A.Manju (Arakalagudu Manju) may quit Congress if party not field candidate in Hassan constituency after JDS-Congress alliance in Lok Sabha Elections-2019. JD(S) supremo H.D.Deve Gowda sitting MP of the constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X