ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ರೈಲು ಸಂಚಾರ

ಹಾಸನ, ನವೆಂಬರ್ 12 : ಶ್ರವಣಬೆಳಗೊಳ ಮೂಲಕ ಮಂಗಳೂರಿಗೆ ರೈಲು ಸಂಚಾರ ನಡೆಸಲು ಅನುಮತಿ ಸಿಕ್ಕಿದೆ. 2018ರ ಫೆಬ್ರವರಿಯಲ್ಲಿ ಬೆಂಗಳೂರು-ಶ್ರವಣಬೆಳಗೊಳ-ಮಂಗಳೂರು ರೈಲು ಸಂಚಾರ ಆರಂಭವಾಗಲಿದೆ.

ಬೆಂಗಳೂರು-ಹಾಸನ ಮಾರ್ಗದಲ್ಲಿ ಈಗಾಗಲೇ ರೈಲು ಸಂಚಾರ ಆರಂಭವಾಗಿದೆ. ಶ್ರವಣಬೆಳಗೊಳ ಮೂಲಕ ಮಂಗಳೂರಿಗೆ ರೈಲು ಸಂಚಾರ ಆರಂಭವಾದರೆ ಪ್ರಯಾಣದ ಅವಧಿ 85 ರಿಂದ 45 ನಿಮಿಷಕ್ಕೆ ಕಡಿಯೆಯಾಗಲಿದೆ.

Bengaluru-Mangaluru train to run via Shravanabelagola from February

ಫೆಬ್ರವರಿ 10ರಿಂದ ವಾರದಲ್ಲಿ 4 ಬಾರಿ ಶ್ರವಣಬೆಳಗೊಳ ಮಾರ್ಗವಾಗಿ ರೈಲು ಸಂಚಾರ ನಡೆಸಲು ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದೆ. ಸದ್ಯ, ಬೆಂಗಳೂರು-ಮಂಗಳೂರು ನಡುವಿನ ರೈಲು ಮೈಸೂರು ಮಾರ್ಗದ ಮೂಲಕ ಸಂಚಾರ ನಡೆಸುತ್ತಿದೆ.

ಬೆಂಗಳೂರಿನಿಂದ ಹೊರಡುವ ರೈಲು ಯಶವಂತಪುರ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ನಿಲ್ದಾಣದಲ್ಲಿ ನಿಂತು ಮಂಗಳೂರು ತಲುಪಲಿದೆ.

ವೇಳಾಪಟ್ಟಿ : ಫೆಬ್ರವರಿ 10ರಿಂದ ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ಸಂಜೆ 7.15ಕ್ಕೆ ಹೊರಡುವ ರೈಲು, ಮರುದಿನ ಬೆಳಗ್ಗೆ 6.20ಕ್ಕೆ ಮಂಗಳೂರನ್ನು ತಲುಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+