ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ!
ಅಸಿಂಧು ಆದೇಶಕ್ಕೆ ತಾತ್ಕಾಲಿಕ ರಿಲೀಫ್ ಕೋರಿದ್ದ ಪ್ರಜ್ವಲ್ ರೇವಣ್ಣಗೆ ಜಯ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಧನಂಜಯ್ ಚಂದ್ರಚೂಡ್, ಪರಡಿವಾಲಾ, ಮನೋಜ್ ಮಿಶ್ರಾ ಮೂವರು ನ್ಯಾಯಾಧೀಶರಿದ್ದ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ.
ಹೀಗಾಗಿ ಅನರ್ಹತೆ ಆದೇಶದಿಂದ ಪ್ರಜ್ವಲ್ ಪಾರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಚುನಾವಣಾ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಸಿಜೆಐ ಪೀಠದಲ್ಲಿ ವಿಚಾರಣೆ ನಡೆಯಿತು.

ಈ ವೇಳೆ ಪ್ರಜ್ವಲ್ ರೇವಣ್ಣಾಗೆ ಸಂಸತ್ ಕಲಾಪಕ್ಕೆ ಭಾಗಿಯಾಗಲು ಸುಪ್ರೀಂ ಅವಕಾಶ ನೀಡಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಗೂ ಸ್ಫರ್ಧೆಗೆ ಅವಕಾಶ ನೀಡಲಾಗಿದೆ. ಆದರೆ ಸಂಸತ್ ಭತ್ಯೆ ಬಳಸಲು ಸುಪ್ರಿಂ ಕೋರ್ಟ್ ಅನುಮಾತಿ ನೀಡಿಲ್ಲ.
ಈ ಹಿಂದೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆ. ನಟರಾಜನ್ ಪೀಠ ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ. ಸುಪ್ರೀಂಕೋರ್ಟ್ಗೆ ಹೋಗಿ, ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೇಕಾಗಿದೆ. ಮಧ್ಯಂತರ ಆದೇಶ ಪಡೆದರೆ ಮಾತ್ರ ಸಂಸತ್ ಕಲಾಪದಲ್ಲಿ ಭಾಗವಹಿಸಬಹುದು. ಹೀಗಾಗಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕೆಂದು ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ರು.
ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ದೂರುದಾರ ದೇವರಾಜೇಗೌಡ, ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದ್ರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಲು ನಿರಾಕರಿಸಿ, ಅರ್ಜಿ ವಜಾಗೊಳಿಸಿತ್ತು. ಆದರೀಗ ಪ್ರಜ್ವಲ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.












Click it and Unblock the Notifications