• search
  • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್‌ ಮರ ಉರುಳಿ ಬೈಕ್ ಸವಾರ ಸಾವು

By (ಹಾಸನ ಪ್ರತಿನಿಧಿ)
|
Google Oneindia Kannada News

ಹಾಸನ, ಆಗಸ್ಟ್‌ 07: ಭಾರೀ ಗಾಳಿ, ಮಳೆಯಿಂದಾಗಿ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, 40 ವರ್ಷದ ರಂಗಶೆಟ್ಟಿ ಎಂಬುವವರು ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ಚನ್ನರಾಯಪಟ್ಟಣದಿಂದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬೃಹತ್‌ ಮರ ಬಿದ್ದಿದ್ದು, ಕಲ್ಲೇಸೋಮನಹಳ್ಳಿ ಗ್ರಾಮದ 40 ವರ್ಷದ ರಂಗಶೆಟ್ಟಿ ಎಂಬಾತ ಸ್ಥಳದಲ್ಲೇ ನರಳಾಡಿ ಸಾವನಪ್ಪಿದ್ದಾನೆ. ರಂಗಶೆಟ್ಟಿ ಎಂಬುವರು ಚನ್ನರಾಯಪಟ್ಟಣದಿಂದ ಬೈಕ್‍ನಲ್ಲಿ ಕಲ್ಲೇಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಗಾತ್ರದ ಮರವೊಂದು ಆತನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧಗಂಟೆಗೂ ಹೆಚ್ಚು ಹೊತ್ತು ನರಳಾಡಿ ತನ್ನನ್ನ ರಕ್ಷಿಸುವಂತೆ ಅಂಗಲಾಚಿದ್ದಾರೆ.

ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು, ರಂಗಶೆಟ್ಟಿಯನ್ನು ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಆತನನ್ನು ಜೀವಂತವಾಗಿ ಉಳಿಸಲು ಸಾಧ್ಯವಾಗಲಿಲ್ಲ. ರಂಗಶೆಟ್ಟಿ ನರಳಾಡುತ್ತಿದ್ದ, ದೃಶ್ಯ ಕಂಡು ಸ್ಥಳದಲ್ಲಿದ್ದವರು ಮರುಗಿದರು. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ 2 ಜೆಸಿಬಿ, ಹಿಟಾಚಿ ಯಂತ್ರ ಬಳಸಿ ರಂಗಶೆಟ್ಟಿ ಮೃತದೇಹವನ್ನು ಹೊರತೆಗೆದರು. ನಂತರ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಲು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಕೆಲಕಾಲ ರಸ್ತೆ ತಡೆದು, ಮರ ತೆರವುಗೊಳಿಸಲು ಬಿಡದೆ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಳೇ ಕಾಲದ ಮರವನ್ನು ತೆರವುಗೊಳಿಸುವಂತೆ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆಗೆ ಗ್ರಾಮ ಪಂಚಾಯಿತಿ ವತಿಯಿಂದ ಮನವಿ ಸಲ್ಲಿಸಿದ್ದರೂ ಕೂಡ ಇದುವರೆಗೂ ತೆರವುಗೊಳಿಸಿಲ್ಲ.

ಪ್ರತಿನಿತ್ಯ ಬಸ್ ಸೇರಿದಂತೆ ಇತರೆ ವಾಹನಗಳನ್ನು ಹತ್ತಲು ಇದೇ ಮರದ ಕೆಳಗೆ ನೂರಾರು ವಿದ್ಯಾರ್ಥಿಗಳು ನಿಲ್ಲುತ್ತಾರೆ. ಇಂದು ಭಾನುವಾರವಾಗಿದ್ದರಿಂದ ಮಕ್ಕಳು ಶಾಲಾ-ಕಾಲೇಜಿಗೆ ಹೋಗಿಲ್ಲ. ಈ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರು ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಕುಳಿತಿದ್ದರು.

English summary
Due to heavy wind and rain, huge tree fell in Malekoppalu village on Bagur road, and 40 year old Rangashetty died, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X