ಜೆಡಿಎಸ್ ಪಕ್ಷದ ಒಂದೊಂದು ಟಿಕೆಟ್ ನಿಂದ 5 ಕೋಟಿ ಸಂಗ್ರಹಿಸಿದ ಕುಮಾರಸ್ವಾಮಿ!
ಹಾಸನ, ಫೆ 21: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ದೇಣಿಗೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ರಾಮ ಮಂದಿರಕ್ಕೆ ಹಣ ಸಂಗ್ರಹ ಮಾಡುತ್ತಿರುವವರು ಪುಂಡ ಪೋಕರಿಗಳು ಎಂದು ಕುಮಾರಸ್ವಾಮಿ ಹೇಳಿದ್ದರು. ಇದು, ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನಡುವಿನ ಮಾತಿನ ಚಕಮಕಿಗೆ ಕಾರಣವಾಗಿದೆ.
ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದರೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ವಿರುದ್ದ, ಹಾಸನದ ಪ್ರಭಾವೀ ಮುಖಂಡ ಬಿಜೆಪಿಯ ಅರಕಲಗೂಡು ಮಂಜು ಗುರುತರ ಆರೋಪವನ್ನು ಮಾಡಿದ್ದಾರೆ.
ನಮ್ಮ ಕುಟುಂಬದ ದೈವಭಕ್ತಿಯ ಮುಂದೆ ನಕಲಿ ಹಿಂದೂಗಳ ದೈವಭಕ್ತಿ ಕಾಲುಭಾಗಕ್ಕೂ ಸಾಲದು ಎಂದು ಎಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿರುವ ಎ.ಮಂಜು, ಚುನಾವಣೆಯ ವೇಳೆ ಟಿಕೆಟ್ ಆಕಾಂಕ್ಷಿಗಳಿಂದ ಕೋಟಿ ಕೋಟಿ ಪೀಕುತ್ತೀರಲ್ವಾ ಅದ್ಯಾವ ಲೆಕ್ಕ ಎಂದು ಪ್ರಶ್ನಿಸಿದ್ದಾರೆ.

ದುಡ್ಡು ತೆಗೆದುಕೊಂಡು ಪಕ್ಷದ ಬಿ-ಫಾರಂ ಕೊಡುತ್ತಿರುವುದಲ್ಲ
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಮಂಜು, "ನಾವು ಈ ನಾಡಿನ ಹೆಮ್ಮೆಯ ಪ್ರತೀಕವಾದ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತಿದ್ದೆವೆಯೇ ಹೊರತು, ದುಡ್ಡು ತೆಗೆದುಕೊಂಡು ಪಕ್ಷದ ಬಿ-ಫಾರಂ ಕೊಡುತ್ತಿರುವುದಲ್ಲ"ಎಂದು ಅವರು ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ
"ಮಂದಿರ ನಿರ್ಮಾಣಕ್ಕೆ ಯಾರನ್ನೂ ಒತ್ತಾಯಿಸುತ್ತಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಿದ್ದಾಗ್ಯೂ, ದೇಣಿಗೆ ಸಂಗ್ರಹ ಮಾಡಲು ಬರುತ್ತಿರುವವರನ್ನು ಪುಂಡ ಪೋಕರಿಗಳು ಎನ್ನುವುದು ಎಷ್ಟು ಸರಿ. ಚುನಾವಣೆಯ ವೇಳೆ ಒಂದೊಂದು ಟಿಕೆಟಿಗೆ ನಾಲ್ಕೈದು ಕೋಟಿ ರೂಪಾಯಿ ತೆಗೆದುಕೊಳ್ಳುತ್ತೀರಲ್ಲಾ. ಅದಕ್ಕೆ ಏನೆಂದು ಹೇಳಬೇಕು"ಎಂದು ಎ.ಮಂಜು ಪ್ರಶ್ನಿಸಿದ್ದಾರೆ.

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ
"ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಆರೆಸ್ಸೆಸ್ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೇ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಉಡುಪಿ ಪೇಜಾವರ ಶ್ರೀಗಳೂ ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದರು
"ಇದೊಂದು ಆಧಾರ ರಹಿತವಾದ ಆರೋಪವಾಗಿದ್ದು, ಶ್ರೀ ರಾಮ ಜನ್ಮಭೂಮಿಯ ನಿಧಿ ಸಂಗ್ರಹ ಪಾರದರ್ಶಕವಾಗಿ ನಡೆಯುತ್ತಿದೆ. ದೇಶದ ಪ್ರತಿಯೊಂದು ರಾಮಭಕ್ತರ ಮನೆಯನ್ನು ಸಂಪರ್ಕಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ"ಎಂದು ಉಡುಪಿ ಪೇಜಾವರ ಶ್ರೀಗಳೂ ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications