ಫೆ.14ರಂದು ಹಾಸನದಲ್ಲಿ ಪ್ರತಿಭಟನೆ ಕರೆ ಕೊಟ್ಟ ಬಿಜೆಪಿ
ಹಾಸನ, ಫೆಬ್ರವರಿ 13 : ಜೆಡಿಎಸ್ ಗೂಂಡಾಗಿರಿ ವರ್ತನೆಯನ್ನು ಖಂಡಿಸಿ ಹಾಸನ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಅವರು ಫೆ.14ರಂದು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ಬುಧವಾರ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ವಯಸ್ಸಾದ ತಾಯಿಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೆಡಿಎಸ್‌ನ ಈ ಗೂಂಡಾಗಿರಿ ವರ್ತನೆಯನ್ನು ಖಂಡಿಸಿ ಹಾಸನ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಫೆ. 14ರಂದು ಬೆಳಗ್ಗೆ 10 ಗಂಟೆಗೆ ಹಾಸನದ ಹೇಮಾವತಿ ಪ್ರತಿಮೆಯಿಂದ ಎನ್.ಆರ್.ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಲಾಗುತ್ತದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಾಸನದ ಸರ್ಕಾರಿ ಆಸ್ಪತ್ರೆಗೆ ಭೇಟಿ ರಾಹುಲ್ ಕಿಣಿ ಮತ್ತು ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಲ್ಲು ತೂರಾಟದಲ್ಲಿ ರಾಹುಲ್ ಕಿಣಿ ಅವರ ಕಣ್ಣಿನ ಭಾಗಕ್ಕೆ ಪೆಟ್ಟು ಬಿದ್ದಿದೆ.
ಐಜಿಪಿ ಭೇಟಿ : ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರು ಶಾಸಕ ಪ್ರೀತಂ ಗೌಡ ಅವರ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದರು. ಗಾಯಾಳು ರಾಹುಲ್ ಕಿಣಿ ಅವರ ಆರೋಗ್ಯ ವಿಚಾರಿಸಿದರು.












Click it and Unblock the Notifications