ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ನೋಟಿಸ್
Recommended Video

ಹಾಸನ, ಫೆಬ್ರವರಿ 05: ಹಾಸನದ ಬೆಂಗಳೂರು-ಮಂಗಳೂರು(ಬಿಎಂ) ರಸ್ತೆ ಅಗಲೀಕರಣ ಕಾಮಗಾರಿ ಸದ್ಯ ಹಾಸನ ರಾಜಕೀಯದ ಪ್ರಮುಖ ವಿಷಯವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ.
ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿದ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲಿಸಿಲ್ಲ. ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದಾರೆ, ಇದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ಆರೋಪಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರಸಭೆ ಆಯುಕ್ತ ಬಿ.ಎ ಪರಮೇಶ್ವರಪ್ಪ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಯಾಗಿದೆ.

ಸುಧಾ ಹಾಗೂ ರಂಗಸ್ವಾಮಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ರವಿ ಮಳಿಮಠ್, ನ್ಯಾ ಬಿಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠವು ಪ್ರತಿಪಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.
ಕಟ್ಟದ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರಿಗೆ ಖುದ್ದು ವಿಚಾರಣೆಗೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಲು ಅವಕಾಶ ಸಿಗಲಿ ಎಂದು ಡಿಸಿ ರೋಹಿಣಿಗೆ ಜನವರಿ 27, 2019ರಂದು ಹೈಕೋರ್ಟ್ ಸೂಚಿಸಿತ್ತು. ಆದರೆ, ಅಕ್ರಮ ಕಟ್ಟಡ ತೆರವು ಕಾರ್ಯ ನಿರಂತರವಾಗಿ ಮುಂದುವರೆಸಲಾಗಿದೆ. ಮೂಲಗಳ ಪ್ರಕಾರ, ಅಕ್ರಮ ಕಟ್ಟಡ ಮಾಲೀಕರಿಗೆ ಈ ಮುಂಚಿತವಾಗಿ ಈ ಬಗ್ಗೆ ನೋಟಿಸ್ ನೀಡಲಾಗಿತ್ತು. ಆದರೆ, ಜಿಲ್ಲಾಧಿಕಾರಿ ವಿರುದ್ಧ ಹೈಕೋರ್ಟಿಗೆ ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.












Click it and Unblock the Notifications