• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಾಸನ; ಎತ್ತಿನ ಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಬಾಲಕ ಸಾವು

By ಹಾಸನ ಪ್ರತಿನಿಧಿ
|

ಹಾಸನ, ಅಕ್ಟೋಬರ್ 8: ಎತ್ತಿನ ಹೊಳೆ ಯೋಜನೆಯ ಕಾಮಗಾರಿಗೆಂದು ತೆಗೆದಿದ್ದ ಗುಂಡಿಯಲ್ಲಿ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿಡಿಗಳಲೆ ಗ್ರಾಮದ 13 ವರ್ಷದ ಋತ್ವಿಕ್ ಮೃತಪಟ್ಟ ಬಾಲಕ. ಇಂದು ಬೆಳಗ್ಗೆ ಋತ್ವಿಕ್ ದನ ಮೇಯಿಸಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಎತ್ತಿನಹೊಳೆ ಯೋಜನೆಯ ಪವರ್ ಪ್ಲಾಂಟ್ ಹೈಟೆನ್ಷನ್ ಯೋಜನೆಗಾಗಿ ಟವರ್ ನಿರ್ಮಾಣಕ್ಕೆ ತೆರೆದಿದ್ದ ಗುಂಡಿಗೆ ಬಿದ್ದು ಋತ್ವಿಕ್ ಸಾವನ್ನಪ್ಪಿದ್ದಾನೆ.

ಬೆಳಗಾವಿ; ನದಿಯಲ್ಲಿ ಸಿಕ್ಕ ಶವದೊಂದಿಗೆ ಇತ್ತು 1.5 ಕೆಜಿ ಚಿನ್ನ!

ಆದರೆ ಎತ್ತಿನ ಹೊಳೆ ಯೋಜನೆಗಾಗಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದೆ. ಹೀಗಾಗಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

   Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

   ಜೊತೆಗೆ ಬಾಲಕನ ಮೃತದೇಹವನ್ನು ಇಟ್ಟುಕೊಂಡು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ದುರ್ಘಟನೆ ಸಂಭವಿಸಿದ ನಂತರ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಇದರಿಂದ ಸ್ಥಳೀಯರ ಆಕ್ರೋಶ ಇನ್ನಷ್ಟು ಹೆಚ್ಚಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

   English summary
   Boy fell and dies in pond which was digged for tower construction under ettinahole project,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X