ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಹಾಸನ, ಸೆಪ್ಟೆಂಬರ್‌ 24: ಚಾಲಕನ ನಿಯಂತ್ರಣ ಮೇಲ್ಸುತುವೆ ಮೇಲೆ ಕಾರು ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ಆದಿಚುಂಚನಗಿರಿ ದೇವಾಲಯಕ್ಕೆ ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲ್ಕೈದು ಬಾರಿ ಪಲ್ಟಿಯಾಗಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಮೇಲ್ಸುತುವೆಯಿಂದ ಕೆಳಕ್ಕೆ ಬೀಳುವಂತೆ ಜೋತು ಬಿದ್ದಿದೆ.

Car Accident At Hassan District Channarayapatna

ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್, ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರೊಂದು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ‌. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ‌ ಕಾಣಿಸಿಕೊಂಡ ಕೂಡಲೇ ಮೂವರು ಕಾರಿನಿಂದ ಇಳಿದು ಪಾರಾಗಿದ್ದಾರೆ. ಇನ್ನು ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car Accident At Hassan District Channarayapatna

ರಾಯಚೂರಿನಲ್ಲಿ ಭೀಕರ ಅಪಘಾತ

ರಾಯಚೂರಿನ ಮಿಯಾಪುರ ಕ್ರಾಸ್‌ನಲ್ಲಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಪ್ಪ (55) ಮೃತ ದುರ್ದೈವಿ. ಇಂಡಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಸಾರಿಗೆ ಬಸ್ ವದುರ್ಗದ ಕಡೆ ಹೊರಟಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+