ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ; ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರಿಗೆ ಶಾಕ್!

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ಜನವರಿ 15: ಕೊರೊನಾ ಸೋಂಕು ಆತಂಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಅರ್ಧದಲ್ಲಿಯೇ ಸ್ಥಗಿತಗೊಂಡಿದೆ. ಆದರೆ, ಕೊರೊನಾ ನಿಯಮಗಳನ್ನು ಮೀರಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಹಾಸನ ಜಿಲ್ಲೆಯಿಂದ ಸುಮಾರು 6 ಸಾವಿರ ಜನ ತೆರಳಿದ್ದರು. ಸದ್ಯ 6000 ಸಾವಿರ ಕಾಂಗ್ರೆಸ್ ನಾಯಕರ ವಿರುದ್ಧ ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿವೆ.

ಜನವರಿ 12ರಂದು ಜಿಲ್ಲೆಯಿಂದ 6 ಸಾವಿರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು. ಪೊಲೀಸರು ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಿಸಿದ್ದು, ಹಾಸನ ನಗರ, ಬಡಾವಣೆ, ಪೆನ್ಷನ್ ಮೊಹಲ್ಲಾ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲೂಕಿನ ಠಾಣೆಗಳಲ್ಲಿ ಕೇಸ್ ದಾಖಲಿಸಿದ್ದಾರೆ.

Hassan: Case Filed Against Congress Leaders Who Attended in Mekedatu Padayatra

ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಜನರನ್ನು ಸೇರಿಸಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ, ನಿರ್ಲಕ್ಷ್ಯ ವಹಿಸಿರುವ ಕಾರ್ಯಕರ್ತರನ್ನು ಕರೆದೊಯ್ದ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರು. ಸದ್ಯ ಎಲ್ಲರ ಮೇಲೆ ಕೇಸ್ ದಾಖಲಾಗಿದ್ದು, ಕೊರೊನಾ ನಿಯಮ ಮೀರಿ ವರ್ತಿಸಿದ್ದಾರೆಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Hassan: Case Filed Against Congress Leaders Who Attended in Mekedatu Padayatra

ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರು ಶಾಕ್‌ಗೆ ಒಳಗಾಗಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಕೇಸ್ ದಾಖಲಿಸಿದ ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಕೋವಿಡ್ ಮಾರ್ಗಸೂಚಿಗೆ ವಿರುದ್ದವಾಗಿ ಜನರನ್ನು ಸೇರಿಸಿ, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಒಟ್ಟಾರೆ, ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿದ್ದ ಮೇಕೆದಾಟು ಪಾದಯಾತ್ರೆ, ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಅರ್ಧದಲ್ಲಿಯೇ ಮೊಟಕುಗೊಂಡಿದೆ. ರಾಜ್ಯದ ನಾನಾ ಭಾಗದಿಂದ ಲಕ್ಷಾಂತರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ನೀರಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Hassan: Case Filed Against Congress Leaders Who Attended in Mekedatu Padayatra

Recommended Video

Indian Army Day: ಭಾರತೀಯ ಸೇನಾ ದಿನಾಚರಣೆಯ ಇತಿಹಾಸ ಮತ್ತು ಮಹತ್ವ | Oneindia Kannada

ಆದರೆ ಈಗ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ನಾಯಕರ ವಿರುದ್ಧ ಕೇಸ್ ದಾಖಲಾಗುತ್ತಿರುವುದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಮಗೆ ಒಂದು ನ್ಯಾಯ, ಬಿಜೆಪಿ ಪಕ್ಷದ ನಾಯಕರಿಗೆ ಒಂದು ನ್ಯಾಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

English summary
Covid Guidelines Violation: Police have filed a case against Congress leaders in Hassan district who participated in the Mekedadu Padayatra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X