ಮತದಾನ ಮಾಡಿ, ಚಂದನ್ ಶೆಟ್ಟಿ ಜೊತೆ ಸೆಲ್ಫಿ ತೆಗಿಸಿಕೊಳ್ಳಿ

ಹಾಸನ, ಏಪ್ರಿಲ್ 17 : ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಗುರುವಾರ ನಡೆಯಲಿದೆ. ಜಿಲ್ಲೆಯಲ್ಲಿ ಮತದಾನ ಮಾಡಿದ ಜನರು ಬಿಗ್‌ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಅವರ ಜೊತೆ ಸೆಲ್ಫಿ ತೆಗಿಸಿಕೊಳ್ಳಬಹುದಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಗುರುವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಅರಸೀಕೆರೆ ನಗರದ ಹೊಯ್ಸಳ ನಗರದಲ್ಲಿರುವ ಗೌರಮ್ಮ ಪ್ರೌಢಶಾಲೆ ಮತಗಟ್ಟೆ ಸಂಖ್ಯೆ 131ನ್ನು ಸಖಿ ಮತಗಟ್ಟೆ ಎಂದು ಹೆಸರಿಸಲಾಗಿದೆ.

ಈ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಗಳನ್ನು ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸಲಿದ್ದಾರೆ. ಇಲ್ಲಿ ಮತದಾನ ಮಾಡಿದವರು ಬಿಗ್‌ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಅವರ ಜೊತೆ ಸೆಲ್ಫಿ ತೆಗಿಸಿಕೊಳ್ಳಬಹುದು.

Cast your vote take selfie with Chandan Shetty

ಚಂದನ್ ಶೆಟ್ಟಿ ಹಾಸನ ಜಿಲ್ಲಾ ಚುನಾವಣಾ ರಾಯಭಾರಿಯಾಗಿದ್ದಾರೆ. ಮತ ಚಲಾವಣೆ ಮಾಡಿದ ಜನರು ಚಂದನ್ ಶೆಟ್ಟಿ ಅವರ ಭಾವಚಿತ್ರದ ಜೊತೆ ಸೆಲ್ಫಿ ತೆಗೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ಬಿಜೆಪಿಯಿಂದ ಎ.ಮಂಜು ಅವರು ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+