Chaddi Gang: ಹಾಸನ ಜಿಲ್ಲೆಯಲ್ಲಿ ಮತ್ತೆ ಪ್ರತ್ಯೆಕ್ಷವಾದ ಚಡ್ಡಿ ಗ್ಯಾಂಗ್
ಹಾಸನ ಜುಲೈ 24: ಹಾಸನ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯೆಕ್ಷವಾಗಿದೆ. ಅರಸೀಕೆರೆ ಪಟ್ಟಣದ ಮಾರುತಿ ನಗರದಲ್ಲಿ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿದೆ.
ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಹಿಂಭಾಗದಲ್ಲಿ ಖತರ್ನಾಕ್ ಚಡ್ಡಿಗ್ಯಾಂಗ್‌ನ ಕಳ್ಳ ಕಾಣಿಸಿಕೊಂಡಿದ್ದಾನೆ. ಕೈಯಲ್ಲಿ ಆಯುಧ ಹಿಡಿದು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೊಂಚು ಹಾಕಿ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರಸೀಕೆರೆ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಚಡ್ಡಿಗ್ಯಾಂಗ್ ಕಾಣಿಸಿಕೊಳ್ಳುತ್ತಿದೆ. ಕೆಲ ತಿಂಗಳ ಹಿಂದೆ ಕೂಡ ನಗರದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಈಗ ಮತ್ತೆ ಕಾಣಿಸಿಕೊಂಡಿದೆ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪಟ್ಟಣದ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಪೊಲೀಸ್ ಬೀಟ್ ಹೆಚ್ಚಿಸುವಂತೆ ಸಾರ್ವಜನಿಕರ ಆಗ್ರಹಿದ್ದಾರೆ.
ಮಂಗಳೂರಿನಲ್ಲಿ ಚಡ್ಡಿ ಗ್ಯಾಂಗ್
ಇದೇ ಜುಲೈ 10 ಮಂಗಳೂರು ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಶೂಟ್ ಔಟ್ ಮಾಡಿರುವ ಘಟನೆ ಸಮೀಪದ ಪಡುಪಣಂಬೂರು ಎಂಬಲ್ಲಿ ನಡೆದಿತ್ತು. ಘಟನೆಯಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ತಗಲಿ ಗಾಯವಾಗಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು.
ಜುಲೈ ಆರರಂದು ಮುಂಜಾನೆ ನಗರದ ಮನೆಯೊಂದಕ್ಕೆ ದರೋಡೆಕೋರರು ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿ ಪರಾರಿಯಾಗಿದ್ದರು. ಘಟನೆ ನಡೆದ ಕೇವಲ 5 ಗಂಟೆಯೊಳಗೆ ಮಂಗಳೂರು ಮತ್ತು ಹಾಸನ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಸಕಲೇಶಪುರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಅದೇ ದಿನ ಅವರನ್ನು ಮಂಗಳೂರಿಗೆ ಕರೆತರಲಾಗಿತ್ತು. ಬುದವಾರ ಬೆಳಗ್ಗೆ ನಗರದ ಹೊರವಲಯದಲ್ಲಿರುವ ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ಪಡಿಸುವ ವೇಳೆಗೆ ಎಎಸ್ಐ ಸೇರಿ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದು ಇಬ್ಬರ ಕಾಲಿಗೆ ತಗಲಿದೆ. ಕಾಲಿಗೆ ಗುಂಡು ತಗುಲಿರುವ ಇಬ್ಬರು ಆರೋಪಿಗಳನ್ನೂ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications