ದೀಪಕ್ ರಾವ್ ಕೊಲೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ..

Posted By:
Subscribe to Oneindia Kannada

ಹಾಸನ, ಜನವರಿ 04: ನಿನ್ನೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಎಲ್ಲಾ ಜೀವವೂ ಅಮೂಲ್ಯವೇ, ಈ ರೀತಿಯ ಘಟನೆ ಆಗಬಾರದಿತ್ತು' ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಗೆ ಮಣಿದ ಡಿಸಿ, ದೀಪಕ್ ರಾವ್ ಅಂತಿಮಯಾತ್ರೆ ಶುರು

ಹಾಸನದಲ್ಲಿ ನವಕರ್ನಾಟಕ ನಿರ್ಮಾಣ ಯಾತ್ರೆಯಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮತೀಯ ಗಲಭೆಯಿಂದ ಜೀವ ಹೋಗಿದ್ದರೆ ಸರ್ಕಾರ ಪರಿಹಾರ ನೀಡುತ್ತದೆ ಎಂದಿದ್ದಾರೆ.

CM Siddaramaiah condemn Deepak rao murder

ಘಟನೆಯನ್ನು ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ಪ್ರಕರಣದ ಹೊಣೆ ಹೊತ್ತು ಗೃಹಸಚಿವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು 'ಎಲ್ಲಾ ಘಟನೆಗಳಿಗೂ ಗೃಹಸಚಿವರು ರಾಜಿನಾಮೆ ಕೊಡಲಾಗುತ್ತಾ' ಎಂದು ಮರು ಪ್ರಶ್ನೆ ಮಾಡಿದರು.

ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗಲು ಬಿಜೆಪಿಯೇ ಕಾರಣ ಎಂದು ದೂರಿದ ಅವರು 'ಬಿಜೆಪಿ ಕೋಮುಗಳ ಮಧ್ಯೆ ಹುಳಿ ಹಿಂಡುವ ಕೆಲಸ ಮಾಡುತ್ತಿದೆ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah said Deepak Rao murder was unfortunate. He said if Deepak died in communal clash govt will give compensation.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ