ಹಾಸನದಲ್ಲಿ ಡಾ.ರಾಜ್‌ಕುಮಾರ್ ಹೇಳಿಕೆ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ
ಹಾಸನ, ಡಿಸೆಂಬರ್, 05: ಹಾಸದಲ್ಲಿ ಇಂದು (ಡಿಸೆಂಬರ್ 05) ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಡಾ.ರಾಜ್‌ಕುಮಾರ್ ಹೇಳಿಕೆ ಉಲ್ಲೇಖ ಮಾಡಿ ಗಮನ ಸೆಳೆದಿದ್ದಾರೆ. ಹಾಗೆಯೇ 3 ಕ್ಷೇತ್ರಗಳಲ್ಲೂ ಉಪನಾವಣೆ ಗೆದ್ದಿದ್ದು ಹೇಗೆ ಎನ್ನುವ ಮಾಹಿತಿಯನ್ನು ಇದೇ ವೇಳೆ ಹೊರಹಾಕಿದ್ದಾರೆ. ಹಾಗಾದರೆ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸಮಾವೇಶದಲ್ಲಿ ರಾಜ್‌ಕುಮಾರ್ ಹೇಳಿಕೆ ಉಲ್ಲೇಖಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಾ.ರಾಜ್‌ಕುಮಾರ್ ಅವರಿಗೆ ಅಭಿಮಾನಿಗಳೇ ದೇವರು, ಮತದಾರರಿಂದ ನಾವು ಗೆದ್ದಿದ್ದೇವೆ. ನಮಗೆ ಮತದಾರರೇ ದೇವರುಗಳು ಎಂದು ಹೇಳುವ ಮೂಲಕ ರಾಜ್‌ಕುಮಾರ್ ಹೇಳಿಕೆ ಉಲ್ಲೇಖ ಮಾಡಿ ಗಮನ ಸೆಳೆದಿದ್ದಾರೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂಡು ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆದಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬಿದ್ದಿತ್ತು. ಈ ವೇಳೆ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ಇನ್ನು ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಗೆಲುವು ಸಾಧಿಸಿತು ಎನ್ನುವ ಮಾಹಿತಿಯನ್ನು ಹಾಸನ ಸಮಾವೇಷದಲ್ಲಿ ಹೊರಹಾಕಿದ್ದಾರೆ.
ಅದರಲ್ಲೂ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರ ಭರತ್ ಬೊಮ್ಮಾಯಿಯನ್ನು ಗೆಲ್ಲಿಸಿಕೊಳ್ಳಲು ಆಗಲಲಿಲ್ಲ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಕೆಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾಮಾರಸ್ವಾಮಿಯನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಕುಟುಕಿದರು. ಹಾಗೆಯೇ ಸಂಡೂರಿನಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.
ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ವಿರುದ್ಧ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಸೋಲನುಭವಿಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದಾರೆ. ಇನ್ನು ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಗೆಲುವು ಸಾಧಿಸಿದ್ದಾರೆ. ಹೀಗೆ ಮೂರು ಕ್ಷೇತ್ರಗಳಲ್ಲೂ ಕೂಡ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿಗೆ ಸೋಲುಣಿಸಿದೆ ಎಂದು ಹೇಳಿದರು.
ಬಿಪಿಎಲ್ ಕಾರ್ಡ್ ಬಗ್ಗೆ ಸಿಎಂ ಹೇಳಿದ್ದೇನು?: ಬಿಜೆಪಿ, ಜೆಡಿಎಸ್ ಬಡವರಿಗೆ ಮೋಸ ಮಾಡುವಂತಹ ಕೆಲಸವನ್ನು ಮುಂದುವರೆಸಿವೆ. ಬಡವರಿಗೆ 7 ಕೆ.ಜಿ. ಅಕ್ಕಿ ಕೊಟ್ಟಿದ್ದು ನಾವು. ಬಿಜೆಪಿಯವರು ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಅಕ್ಕಿಯನ್ನು 5 ಕೆ.ಜಿಗೆ ಇಳಿಸಿದರು. ಇಲ್ಲೇ ಗೊತ್ತಾಗುತ್ತದೆ ಬಡವರಿಗೆ ಯಾರು ಅನ್ಯಾಯ ಮಾಡುತ್ತಿದ್ದಾರೆ. ಅವರು ಬಿಪಿಎಲ್ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಹಾಗೆಯೇ ಇದೇ ವೇಳೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಮ್ಮ 5 ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ನಮ್ಮದು ಬಡವರು, ಹಿಂದುಳಿದ ಪರ ಇರುವ ಪಕ್ಷವಾಗಿದೆ. ಆದ್ದರಿಂದ ಮುಂದಿನ ಬಾರಿಯೂ ಕೂಡ ನಮ್ಮ ಸರ್ಕಾರಕ್ಕೆ ಅಧಿಕಾರಕ್ಕೆ ಬರಲಿದೆ. ಇಂದಿನ ಹಾಸನ ಸಮಾವೇಶ ಹೊಸ ಇತಿಹಾಸನ ಸೃಷ್ಟಿಸಲಿದೆ ಎಂದು ಹೇಳುವ ಮೂಲಕ ಬಿಜೆಪಿ, ಜೆಡಿಎಸ್‌ಗೆ ಕುಟುಕಿದರು.












Click it and Unblock the Notifications