ಹಾಸನ ಜಿಲ್ಲೆಯಲ್ಲಿ ಕುಸಿಯುವ ಹಂತದಲ್ಲಿರುವ 40 ಮನೆಗಳು: ಜನರಿಗೆ ಆತಂಕ
ಹಾಸನ, ಆಗಸ್ಟ್, 05: ಜಿಲ್ಲೆಯ ಚನ್ನರಾಯಪಟ್ಟಣ ಭೂವನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮನೆ ಗೋಡೆ ಕುಸಿತದಿಂದ 13 ವರ್ಷದ ಪ್ರಜ್ವಲ್ ಎಂಬ ಬಾಲಕ ಮೃತಪಟ್ಟಿದ್ದ. ಇದೀಗ 40ಕ್ಕೂ ಹೆಚ್ಚು ಮನೆಗಳು ಕುಸಿಯುವ ಹಂತದಲ್ಲಿದ್ದು, ಅಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಭೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಮನೆ ಗೋಡೆ ಕುಸಿದು ಪ್ರಜ್ವಲ್ ಎಂಬ 13 ವರ್ಷದ ಬಲಕ ಮೃತಪಟ್ಟಿದ್ದು, ನುಗ್ಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದ ತಡ ರಾತ್ರಿ ಮಲಗಿದ್ದಾಗ ಮನೆಯ ಗೋಡೆ ಕುಸಿದಿದ್ದು, ಬಾಲಕನ ಪಕ್ಕದಲ್ಲಿ ಮಲಗಿದ್ದ ಅಜ್ಜಿಗೂ ಗಂಭೀರ ಗಾಯವಾಗಿದೆ.
ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟಿದ್ದನ್ನು ಕಂಡು ಅಲ್ಲಿನ ಜನರು ಭಯಭೀತರಾಗಿದ್ದಾರೆ. ಇಡೀ ಗ್ರಾಮದಲ್ಲಿ 40ಕ್ಕೂ ಹೆಚ್ಚು ಮನೆಗಳು ಕುಸಿಯುವ ಹಂತದಲ್ಲಿದ್ದು, ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಬದುಕುವಂತೆ ಆಗಿದೆ. ಇದೀಗ ಭೂವನಹಳ್ಳಿ ಗ್ರಾಮದ ಜನರಲ್ಲಿ ಭೀತಿ ಶುರುವಾಗಿದೆ. ಕುಸಿಯುತ್ತಿರುವ ಮನೆಗಳನ್ನು ರಕ್ಷಣೆ ಮಾಡಿಕೊಳ್ಳಲು ಬಡಜನರು ಪರದಾಡುತ್ತಿದ್ದಾರೆ.

ಅಲ್ಲದೇ ನಮ್ಮ ಜೀವ ಉಳಿಸಿ ಎಂದು ಜನರು ಕಣ್ಣೀರಿಡುತ್ತಿದ್ದಾರೆ. ಸುಮಾರು 40ಕ್ಕಿಂತ ಹೆಚ್ಚಿನ ಮನೆಗಳು ಯಾವಾಗ ಬೇಕಾದರೂ ಕುಸಿಯುವ ಹಂತದಲ್ಲಿವೆ. ಮಣ್ಣಿನ ಗೋಡೆಗಳಾದ ಕಾರಣ ಮಳೆಯಿಂದ ಶೀತ ಹೆಚ್ಚಾಗಿ ಅಲ್ಲಿನ ಮನೆಗಳು ಕುಸಿಯುತ್ತಲೇ ಇವೆ.
ಆದ್ದರಿಂದ ನಮಗೆ ತಕ್ಷಣ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಜನರು ಅಧಿಕಾರಿಗಳ ಬಳಿ ಬೇಡಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಭಾರಿ ಮಳೆಗೆ ಅರಕಲಗೂಡು ತಾಲೂಕಿನ ಕೋಣನೂರು ಕೆರೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ರಸ್ತೆ ನೂರು ಮೀಟರ್‌ಗೂ ಹೆಚ್ಚು ದೂರ ಬಿರುಕು ಬಿಟ್ಟಿರುವ ಹಿನ್ನೆಲೆ ಇಪ್ಪತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿದೆ. ರಸ್ತೆ ಇನ್ನು ಕುಸಿಯುವ ಭೀತಿ ಇರುವುದರಿಂದ ವಾಹನ ಸಂಚಾರವನ್ನು ಸ್ಥಗಿತ ಮಾಡುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಇನ್ನು ನೀರು ಹೆಚ್ಚಿದ ಕಾರಣ ಕೋಣನೂರು ಕೆರೆ ಒಡೆಯುವ ಭೀತಿಯಲ್ಲಿದೆ. ಕೆರೆ ಏರಿ ಒಡೆದರೆ ನೂರಾರು ಎಕರೆ ಜಮೀನು ಜಲಾವೃತವಾಗುವ ಸಂಭವ ಎದುರಾಗಿದೆ. ಕಳೆದ 15 ದಿನಗಳ ಹಿಂದೆ ಕೆರೆ ಏರಿ ಸ್ವಲ್ಪ ಬಿರುಕು ಕಾಣಿಸಿಕೊಂಡಿತ್ತು. ಅಧಿಕಾರಿಗಳ ಬೇಜವ್ದಾರಿಯಿಂದಲೇ ಕೆರೆ ಏರಿ ದೊಡ್ಡ ಮಟ್ಟದಲ್ಲಿ ಬಿರುಕು ಬಿಡುತ್ತಿವೆ ಎಂದು ಅಲ್ಲಿನ ಸ್ಥಳೀಯರು ಆರೋಪಿಸುತ್ತಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications