ಮಾಜಿ ಸಚಿವ ಎ.ಮಂಜು ಬಿಜೆಪಿಗೆ, ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ?
Recommended Video

ಹಾಸನ, ಮಾರ್ಚ್ 12: ಕಾಂಗ್ರೆಸ್‌ನ ಮಾಜಿ ಸಚಿವ ಎ.ಮಂಜು ಅವರು ನಾಳೆ ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಎ.ಮಂಜು ಅವರೇ ಮಾಧ್ಯಮಗಳೊಟ್ಟಿಗೆ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.
ಹಾಸನದಲ್ಲಿ ದೇವೇಗೌಡರ ಕುಟುಂಬ ರಾಜಕೀಯದ ವಿರುದ್ಧ ಹೋರಾಡುತ್ತಾ ಬಂದಿದ್ದ ಎ.ಮಂಜು ಅವರು ಮೈತ್ರಿ ಸರ್ಕಾರ ರಚನೆ ಆದಂದಿನಿಂದಲೂ ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರುತ್ತಲೇ ಇದ್ದರು.
ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದ ಅವರು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡು ಈಗ ಬಿಜೆಪಿ ಕೈಹಿಡಿಯಲು ಸಕಲ ಸಿದ್ಧತೆ ನಡೆಸಿದ್ದಾರೆ. ನಾಳೆಯೇ ಅವರು ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮಂಜು ಕಣಕ್ಕೆ?
ಹಾಸನದಲ್ಲಿ ಮೈತ್ರಿಯ ಅಭ್ಯರ್ಥಿ ಆಗಿರುವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎ.ಮಂಜು ಅವರು ಬಿಜೆಪಿ ಯಿಂದ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಸಾಧ್ಯತೆಗಳೂ ಇವೆ. ರೇವಣ್ಣ ವಿರುದ್ಧ ಸ್ಪರ್ಧಿಸಲೆಂದೇ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

'ಯಡಿಯೂರಪ್ಪ ಅವರೊಂದಿಗೆ ಮಾತುಕತೆ ಆಗಿದೆ'
ಸುದ್ದಿಗಾರರೊಂದಿಗೆ ಮಾತನಾಡಿದ ಎ.ಮಂಜು ಅವರು ನಾನು ಯಡಿಯೂರಪ್ಪ ಅವರೊಂದಿಗೆ ಮಾತನಾಡಿರುವುದು ನಿಜ. ಕಾರ್ಯಕರ್ತರು ಸಹ ನಾನು ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸುತ್ತಿದ್ದಾರೆ. ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಕ್ಷೇತ್ರದ ಮತದಾರರಿಗೆ ಬೇಸರವಿದೆ ಎಂದು ಮಂಜು ಹೇಳಿದ್ದಾರೆ.

ರೇವಣ್ಣ ಕುಟುಂಬದ ಕಠು ವಿರೋಧಿ ಎ.ಮಂಜು
ದೇವೇಗೌಡರ ಕುಟುಂಬದ ವಿರೋಧಿ ಆಗಿರುವ ಅದರಲ್ಲಿಯೂ ವಿಶೇಷವಾಗಿ ರೇವಣ್ಣ ಅವರ ಕುಟುಂಬದ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಲೇ ಬಂದಿರುವ ಎ.ಮಂಜು ಅವರು ಈಗ ರೇವಣ್ಣ ಅವರ ಮಗನ ವಿರುದ್ಧ ಕಣಕ್ಕಿಳಿಯುವ ಸಿದ್ಧತೆಯಲ್ಲಿದ್ದಾರೆ. ಎ.ಮಂಜು ಹಾಸನ ಕಾಂಗ್ರೆಸ್‌ನ ಪ್ರಮುಖ ಮುಖಂಡ ಆಗಿದ್ದು ಅವರು ಪಕ್ಷ ಬಿಡುತ್ತಿರುವುದು ಹಾಸನದಲ್ಲಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ಎನ್ನಲಾಗುತ್ತಿದೆ.

ಮಂಜು ಸೇರ್ಪಡೆಗೆ ಸ್ಥಳೀಯ ಬಿಜೆಪಿ ಅಪಸ್ವರ
ಎ.ಮಂಜು ಅವರು ಬಿಜೆಪಿ ಸೇರುತ್ತಿರುವುದನ್ನು ಕೆಲವು ಸ್ಥಳೀಯ ಬಿಜೆಪಿ ಮುಖಂಡರೇ ವಿರೋಧಿಸುತ್ತಿದ್ದಾರೆ. ಹಾಸನದ ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗ ರಮೇಶ್ ಅವರೂ ಸಹ ಎ.ಮಂಜು ಅವರ ಆಗಮನವನ್ನು ಕಠುವಾಗಿ ಟೀಕಿಸಿದ್ದಾರೆ. ಅವರಿಂದ ಪಕ್ಷಕ್ಕೇನೂ ಲಾಭವಿಲ್ಲ ಎಂದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications