ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ ರಾಜಕೀಯ ಲೆಕ್ಕಾಚಾರ ಬದಲು; ಕಾಂಗ್ರೆಸ್ ನಾಯಕ ಬಿಜೆಪಿಗೆ!

|
Google Oneindia Kannada News

ಹಾಸನ, ಡಿಸೆಂಬರ್ 06; ರಾಜ್ಯದ ರಾಜಕೀಯವೇ ಬೇರೆ ಹಾಸನ ಜಿಲ್ಲೆಯ ರಾಜಕೀಯವೇ ಬೇರೆ. ಜೆಡಿಎಸ್ ಪಕ್ಷದ ಭದ್ರಕೋಟೆ ಹಾಸನದಲ್ಲಿ ಅಧಿಪತ್ಯ ಸಾಧಿಸಲು ಬಿಜೆಪಿ ಪ್ರಯತ್ನ ನಡೆಸುತ್ತಲೇ ಬಂದಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಜಿಲ್ಲೆಯಲ್ಲಿ ಪಕ್ಷದ ತಯಾರಿ ಜೋರಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ನಾಯಕ ಯೋಗ ರಮೇಶ್ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ವಾಪಸ್ ಆಗಿದ್ದಾರೆ. ಇದು ಜಿಲ್ಲೆಯ ರಾಜಕೀಯ ಲೆಕ್ಕಾಚಾರ ಬದಲಾಯಿಸಿದೆ.

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮಾಜಿ ಸಚಿವ; ಸಿದ್ದರಾಮಯ್ಯ ಭೇಟಿ!ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮಾಜಿ ಸಚಿವ; ಸಿದ್ದರಾಮಯ್ಯ ಭೇಟಿ!

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಹಾಸನ ಜಿಲ್ಲಾಧ್ಯಕ್ಷ ಹೆಚ್. ಕೆ. ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ಎ. ಮಂಜು ಕಾಂಗ್ರೆಸ್ ಸೇರ್ಪಡೆ; ಬಂತು ಸ್ಫೋಟಕ ಸುದ್ದಿ!ಎ. ಮಂಜು ಕಾಂಗ್ರೆಸ್ ಸೇರ್ಪಡೆ; ಬಂತು ಸ್ಫೋಟಕ ಸುದ್ದಿ!

ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ. ಮಂಜು ಕಾಂಗ್ರೆಸ್‌ಗೆ ವಾಪಸ್ ಆಗುವ ಸುದ್ದಿ ಹಬ್ಬಿದೆ. ಇಂತಹ ಸಮಯದಲ್ಲಿಯೇ ಕಾಂಗ್ರೆಸ್‌ನಲ್ಲಿದ್ದ ಯೋಗ ರಮೇಶ್ ಬಿಜೆಪಿಗೆ ವಾಪಸ್ ಆಗಿದ್ದಾರೆ. 2023ರ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ.

ಕೊಡಗಿನಲ್ಲಿ ಚುನಾವಣೆಗೂ ಮುನ್ನವೇ ಬೀಗುತ್ತಿರುವ ಬಿಜೆಪಿ!ಕೊಡಗಿನಲ್ಲಿ ಚುನಾವಣೆಗೂ ಮುನ್ನವೇ ಬೀಗುತ್ತಿರುವ ಬಿಜೆಪಿ!

ಕಾಂಗ್ರೆಸ್ ಸೇರಿ ತಪ್ಪು ಮಾಡಿದೆ

ಕಾಂಗ್ರೆಸ್ ಸೇರಿ ತಪ್ಪು ಮಾಡಿದೆ

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಯೋಗ ರಮೇಶ್‌, "ಹಾಸನದಲ್ಲಿ ಜೆಡಿಎಸ್ ಸಂಘಟನೆ ಮೀರಿ ಪಕ್ಷ ಬೆಳೆಸುವ ಕೆಲಸ ಮಾಡಿದ್ದೆವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿತ್ತು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಜೊತೆ ಸಮಬಲ ಹೋರಾಟ ಮಾಡಿದ್ದೆವು. ಎಂಪಿ ಚುನಾವಣೆ ವೇಳೆ ಎ.ಮಂಜು ಬಿಜೆಪಿಗೆ ಬಂದರು. ಆವಾಗ ನಾನು ಕಾಂಗ್ರೆಸ್ ಸೇರಿ ತಪ್ಪು ಮಾಡಿದೆ ಅನ್ನಿಸಿತ್ತು" ಎಂದರು.

ಕಾಂಗ್ರೆಸ್ ಸೇರಿದ್ದು ಕಹಿ ಘಟನೆ

ಕಾಂಗ್ರೆಸ್ ಸೇರಿದ್ದು ಕಹಿ ಘಟನೆ

"ಕಾಂಗ್ರೆಸ್ ಸೇರಿದ್ದು ನನ್ನ ಜೀವನದ ಕಹಿ ಘಟನೆ. ನಂತರ ಅರಿವು ಆಗಿ ಮತ್ತೆ ಬಿಜೆಪಿ ಸೇರುವ ನಿರ್ಧಾರ ಮಾಡಿದೆ. ಆವತ್ತು ನಾನು ಪಕ್ಷದಲ್ಲಿ ಉಳಿದಿದ್ದರೆ ನೂರಕ್ಕೆ ನೂರು ಎಂಪಿ ಸ್ಥಾನ ಗೆಲ್ಲಬಹುದಿತ್ತು. ಇಷ್ಟು ದಿನ ಯಾವುದೇ ರಾಜಿ ಮಾಡಿಕೊಳ್ಳದೇ ಕಾಂಗ್ರೆಸ್, ಜೆಡಿಎಸ್ ಎದುರಿಸಿದ್ದೇವೆ" ಎಂದು ಯೋಗ ರಮೇಶ್ ಹೇಳಿದ್ದಾರೆ.

ಬಿಜೆಪಿಯಿಂದ ಕಣಕ್ಕೆ, ಸೋಲು

ಬಿಜೆಪಿಯಿಂದ ಕಣಕ್ಕೆ, ಸೋಲು

ಅರಕಲಗೂಡು ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಯೋಗ ರಮೇಶ್ ಬಿಜೆಪಿಯಿಂದ ಕಣಕ್ಕಿಳಿದಿದ್ದರು. 22,679 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎ. ಮಂಜು 74,411 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಎ. ಟಿ. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆದ್ದಿದ್ದರು.

2019ರ ಲೋಕಸಭೆ ಚುನಾವಣೆ ಸಮಯಲ್ಲಿ ಎ. ಮಂಜು ಬಿಜೆಪಿಗೆ ಸೇರಿದ್ದರು. ಆಗ ಯೋಗ ರಮೇಶ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಈಗ ಪುನಃ ಬಿಜೆಪಿಗೆ ಮರಳಿದ್ದಾರೆ.

ಎ. ಮಂಜು ಕಾಂಗ್ರೆಸ್‌ಗೆ ವಾಪಸ್?

ಎ. ಮಂಜು ಕಾಂಗ್ರೆಸ್‌ಗೆ ವಾಪಸ್?

ಬಿಜೆಪಿಯಲ್ಲಿರುವ ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುದ್ದಿಗಳು ಹಬ್ಬಿವೆ. "ಎ. ಮಂಜು ಜೊತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ" ಎಂದು ವಿಧಾನ ಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ಹೇಳಿದ್ದಾರೆ.

"ಮಾಜಿ ಸಚಿವ ಎ. ಮಂಜು ಪುತ್ರ ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವುದರಿಂದ ಬಿಜೆಪಿಯಲ್ಲಿನ ಹೈಕಮಾಂಡ್ ತೀರ್ಮಾನದಂತೆ ಕೆಲ ನಿರ್ಬಂಧಗಳನ್ನು ಮೀರಿದ್ದಾರೆ" ಎಂದು ಎಂ. ಎ. ಗೋಪಾಲಸ್ವಾಮಿ ತಿಳಿಸಿದ್ದಾರೆ.

ಮಂಜು ಪುತ್ರ ಕಾಂಗ್ರೆಸ್ ಅಭ್ಯರ್ಥಿ

ಮಂಜು ಪುತ್ರ ಕಾಂಗ್ರೆಸ್ ಅಭ್ಯರ್ಥಿ

ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಕೊಡಗು ಸ್ಥಳೀಯ ಸಂಸ್ಥೆಗಳಿಂದ ಬಿಜೆಪಿ ನಾಯಕ ಎ. ಮಂಜು ಪುತ್ರ ಮಂಥರ್ ಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಈ ಕುರಿತು ಮಾತನಾಡಿದ್ದ ಎ. ಮಂಜು, "ಇರುವ ಒಬ್ಬ ಮಗನನ್ನು ಕಳೆದುಕೊಳ್ಳಲು ಆಗಲ್ಲ, ಹಾಗಾಗಿ ಹೋಗಲೇಬೇಕು. ಮಗನ ಪರ ಎಲೆಕ್ಷನ್ ಮಾಡಿಲ್ಲ ಎಂಬ ಪಾಪಕ್ಕೆ ಏಕೆ ಗುರಿಯಾಗಬೇಕು?. ನೂರಕ್ಕೆ ನೂರು ಮಗನ ಪರ ಪ್ರಚಾರಕ್ಕೆ ಹೋಗುತ್ತೇನೆ" ಎಂದು ಹೇಳಿಕೆ ಕೊಟ್ಟಿದ್ದಾರೆ.

Recommended Video

ಗೋಧಿ ಹಾಗೂ ಜೀವರಕ್ಷಕ ಔಷಧ ಸಾಗಿಸಲು ಪಾಕ್ ಅನುಮತಿ | Oneindia Kannada

English summary
Hassan politics Congress leader H. Yogaramesha returned to BJP. He may contest for 2023 assembly elections from Arakalgud from BJP ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X