ಅಕ್ರಮ ಗೋ ಸಾಗಣೆ ವೇಳೆ ವಾಹನ ಪಲ್ಟಿ: 7 ಕರುಗಳು ಸಾವು, ಚಾಲಕ ಎಸ್ಕೇಪ್
ಹಾಸನ, ಮೇ 17: ಅಕ್ರಮ ಗೋ ಸಾಗಣೆ ವೇಳೆ ಸಂಭವಿಸಿದ ಅಪಘಾತದಲ್ಲಿ 7 ಕರುಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಜಿ. ಹಿರಿಸಾವೆ ಬಳಿ ನಡೆದಿದೆ.
ಆರೋಪಿಗಳು ನಿನ್ನೆ ತಡರಾತ್ರಿ ಕಂಟೇನರ್ ಲಾರಿವೊಂದರಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಗೋವುಗಳನ್ನು ತುಂಬಿಕೊಂಡು ಅಕ್ರಮ ಸಾಗಾಟ ಮಾಡಲು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ಆರೋಪಿಗಳ ಬೆನ್ನಟ್ಟಿದ್ದಾರೆ. ಪೊಲೀಸರು ವಾಹನ ತಡೆಯುತ್ತಿದ್ದಂತೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದಾನೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ವೇಗವಾಗಿ ವಾಹನ ಚಲಾಯಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪದು ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ವಾಹನದಿಂದ ಕೆಳಗಿಳಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ7 ಕರುಗಳು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಹಿರಿಸಾವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಉಪಟಳ: ಲಕ್ಷಾಂತರ ಮೌಲ್ಯದ ಬೆಳೆ ನಾಶ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಉಪಟಳ ಮುಂದುವರಿದಿದ್ದು, ಕಾಡಾನೆ ದಾಂಧಲೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ನಡೆದಿದೆ. ಬಣಕಲ್ ಸಮೀಪದ ಗುತ್ತಿಹಳ್ಳಿ ಗ್ರಾಮಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳ ಗುಂಪು ಅಡಿಕೆ ,ಬಾಳೆ ಹಾಗೂ ಕಾಫಿ ಬೆಳೆ ಸರಿದಂತೆ ಲಕ್ಷಾಂತರ ಮೌಲ್ಯದ ಬೆಳೆ ನಾಶ ಮಾಡಿದೆ.
ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಹಾಕದ ಅರಣ್ಯ ಅಧಿಕಾರಿಗಳ ವಿರುದ್ಧ ಬಣಕಲ್ ಸಮೀಪದ ಗುತ್ತಿಹಳ್ಳಿ ಗ್ರಾಮದ ಜನ ಆಕ್ರೋಶ ಹೊರ ಹಾಕಿದ್ದು, ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ. ಮೂಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ರೈತರು ಹಾಗೂ ಸ್ಥಳೀಯರು ಹೈರಾಣಾಗಿ ಹೋಗಿದ್ದಾರೆ.












Click it and Unblock the Notifications